Bus Accident: ಬೆಂಗಳೂರಿಗೆ ಬರುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಸಾವು

ತುಮಕೂರು: ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ರಸ್ತೆ ಪಕ್ಕದ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ…

ತುಮಕೂರು: ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ರಸ್ತೆ ಪಕ್ಕದ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.

ಬೆಳಗಿನ ಜಾವ 4.30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್‌ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನೆಲ್ಲ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಸ್‌ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಕಳ್ಳಂಬೆಳ್ಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್‌ ಹಾಗೂ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.