ಚಿಕ್ಕಮಗಳೂರು: ‘ಸಂಘಟನೆ, ಸಿದ್ಧಾಂತ, ನೇತೃತ್ವ ಮೂರೂ ಸರಿ ಇಲ್ಲದಿದ್ದಾಗ ಆಗಬೇಕಾಗಿದ್ದೆ ಆಗಿದೆ’ ಎಂದು ಹೇಳುವ ಮೂಲಕ ಸಿಟಿ ರವಿ ಅವರು ಪರೋಕ್ಷವಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.
ಹೌದು, ಹಾನಗಲ್-ಸಿಂದಗಿ ಬೈ ಎಲೆಕ್ಷನ್ ನಲ್ಲಿ ಜೆಡಿಎಸ್ ಹೀನಾಯ ಸೋಲು ಕಂಡಿದ್ದು, ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿಟಿ ರವಿ ಅವರು, ಭವಿಷ್ಯದ ರಾಜಕಾರಣದ ಬಗ್ಗೆ ಮಾತನಾಡುವವರು ಯೋಚಿಸಲಿ. ಮುಂದೆ ಪ್ರಾದೇಶಿಕ ಪಕ್ಷಕ್ಕೆ ಜನರ ಬೆಂಬಲ ಎಂದು ಆಶಾವಾದ ಇರುವವರು ಆಲೋಚಿಸಬೇಕಿದೆ ಎಂದು ಮಾಜಿ ಸಿಎಂ ಎಚ್ಡಿಕೆಗೆ ಕುಟುಕಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.