ವಿಕಲಚೇತನರ ಸಬಲೀಕರಣಕ್ಕಾಗಿ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ/ವಿಜಯನಗರ,ಜು.28: ಕೇಂದ್ರ ಸರ್ಕಾರವು 2021-22 ಮತ್ತು 2022-23ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ವ್ಯಕ್ತಿ/ಸಂಸ್ಥೆಗಳಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ…

application vijayaprabha news

ಬಳ್ಳಾರಿ/ವಿಜಯನಗರ,ಜು.28: ಕೇಂದ್ರ ಸರ್ಕಾರವು 2021-22 ಮತ್ತು 2022-23ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ವ್ಯಕ್ತಿ/ಸಂಸ್ಥೆಗಳಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳಾದ ಕೆ.ಮಹಾಂತೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿಗಳನ್ನು ಆ.28ರೊಳಗೆ ಸಲ್ಲಿಸಬೇಕು. ಅರ್ಜಿಗಳನ್ನು ಆನ್‍ಲೈನ್ ಮುಖಾಂತರ www.awards.gov.in ಮತ್ತು www.disabilityaffairs.gov.in ವೆಬ್-ಸೈಟ್‍ನಲ್ಲಿ ಸಲ್ಲಿಸಬೇಕು.

ಬೇಕಾದ ದಾಖಲೆಗಳು: 2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳು (ವೈಯಕ್ತಿಕ ವಿಭಾಗ), ಅರ್ಜಿದಾರರ ವ್ಯಕ್ತಿಗಳ/ಸಂಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆಗಳೊಂದಿಗೆ, ಡ್ರಾಫ್ಟ್ ಸೈಟೇಷನ್(1 ಪುಟಕ್ಕೆ ಮೀರದಂತೆ) ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಬೇಕು.

Vijayaprabha Mobile App free

ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಆಂಗ್ಲ ಭಾಷೆಯಲ್ಲಿ ವಿವರಗಳನ್ನು ಭರ್ತಿಮಾಡಿ ಅಗತ್ಯ ದಾಖಲೆಗಳ ಪ್ರಸ್ತಾವನೆಯನ್ನು ದ್ವಿಪ್ರತಿಯಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯವರು ಬಳ್ಳಾರಿಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ದೂ.08392267886 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.