BREAKING: ಸಂಸತ್ತಿನ ಚಳಿಗಾಲದ ಅಧಿವೇಶನ ರದ್ದು!

ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಲು ಎಲ್ಲಾ ಪಕ್ಷಗಳು…

Parliament vijayaprabha

ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಲು ಎಲ್ಲಾ ಪಕ್ಷಗಳು ಒಪ್ಪಿಕೊಂಡಿವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಕೋವಿಡ್-19 ಹರಡುವುದನ್ನು ತಡೆಯಲು ಹಾಗೂ ಜನವರಿಯಲ್ಲಿ ನೇರವಾಗಿ ಬಜೆಟ್ ಅಧಿವೇಶನ ನಡೆಸುವ ಉದ್ದೇಶದಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ರದ್ದುಪಡಿಸುವ ಕುರಿತಂತೆ ಸರ್ವಪಕ್ಷಗಳು ಒಲವು ಹೊಂದಿವೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ನಡೆಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಬರೆದಿರುವ ಪತ್ರದ ಹಿನ್ನೆಲೆಯಲ್ಲಿ ಸಚಿವ ಪ್ರಹ್ಲಾದ್ ಜೋಶಿ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.