ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಸಮರಕ್ಕೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿದ್ದು, ಈ ಬಾರಿ 110 ಜಿಲ್ಲಾ ಪಂಚಾಯತಿ ಕ್ಷೇತ್ರಗಳು ಹೆಚ್ಚಾಗಲಿದ್ದು, 600 ತಾಲೂಕು ಪಂಚಾಯಿತಿ ಕ್ಷೇತ್ರಗಳು ರದ್ದಾಗಲಿವೆಯಂತೆ.
ಹೌದು, ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಕ್ಷೇತ್ರ ಪುನರ್ ವಿಂಗಡಣೆಯಾಗಲಿದ್ದು, ಈಗಾಗಲೇ ಆಯಾ ಜಿಲ್ಲಾಧಿಕಾರಿಗಳು ಪುನರ್ ವಿಂಗಡಣೆಯ ಮಾಹಿತಿ ಹಾಗೂ ನಕ್ಷೆಗಳನ್ನು ಫೆಬ್ರುವರು19, 20 ಮತ್ತು 22ರಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಕ್ಷೇತ್ರಗಳ ಬಗ್ಗೆಯೂ ಅಚ್ಚರಿಯ ಮಾಹಿತಿ ಹೊರಬೀಳಬಹುದು ಎನ್ನಲಾಗಿದೆ.
ಈ ಬಗ್ಗೆ ಇತ್ತೀಚಿಗೆ ಸದನದಲ್ಲಿ ಬಿಜೆಪಿ ಸದಸ್ಯ ಕುಮಾರ್ ಬಂಗಾರಪ್ಪ ಅವರು ವಿಚಾರ ಪ್ರಸ್ತಾಪಿಸಿ, ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗೆ ಸಿಗುವ ಮಹತ್ವ ತಾಲೂಕು ಪಂಚಾಯಿತಿಗೆ ಸಿಗುತ್ತಿಲ್ಲ. ಆದ್ದರಿಂದ ಮೂರು ಹಂತದ ಪಂಚಾಯಿತಿ ವ್ಯವಸ್ಥೆಯನ್ನು ಎರಡು ಹಂತಕ್ಕೆ ಇಳಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ಪಡಿಸಿದ್ದು, ಇದಕ್ಕೆ ಪಕ್ಷಾತೀತವಾಗಿ ಹಲವು ಸದಸ್ಯರು ಸಹಮತ ವ್ಯಕ್ತಪಡಿಸಿದ್ದರು.
ಇದನ್ನು ಓದಿ: ಒಂದು ಗ್ರಾಮ ಪಂಚಾಯಿತಿ ಯಶಸ್ವಿಯಾಗಿ ನಿರ್ವಹಿಸಲು ಮಾಡಲೇಬೇಕಾದ ಕರ್ತವ್ಯಗಳೇನು? ಹೊಣೆಗಳೇನು? ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕು
ಇದನ್ನು ಓದಿ: ಭಾಗ-2: ಒಂದು ಗ್ರಾಮ ಪಂಚಾಯಿತಿ ಯಶಸ್ವಿಯಾಗಿ ನಿರ್ವಹಿಸಲು ಮಾಡಲೇಬೇಕಾದ ಕರ್ತವ್ಯಗಳೇನು? ಹೊಣೆಗಳೇನು?