ದೇವಾಲಯಕ್ಕೆ ತೆರಳುತ್ತಿದ್ದ ಕಾರು ಅಪಘಾತ: ಯುವಕ ಸಾವು

Car accident : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವಿಗೀಡಾದ ಘಟನೆ ಶಿವಮೊಗ್ಗದ ಕುಂಸಿ ಸಮೀಪದ ಕೆರೆಕೋಡಿ ಬಳಿ ನಡೆದಿದೆ. ಅಪಘಾತದಲ್ಲಿ ನಾಲ್ವರು ಯುವಕರು ಗಾಯಗೊಂಡಿದ್ದು, ಮೃತಪಟ್ಟ ಯುವಕನನ್ನು…

Accident vijayaprabhanews

Car accident : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವಿಗೀಡಾದ ಘಟನೆ ಶಿವಮೊಗ್ಗದ ಕುಂಸಿ ಸಮೀಪದ ಕೆರೆಕೋಡಿ ಬಳಿ ನಡೆದಿದೆ.

ಅಪಘಾತದಲ್ಲಿ ನಾಲ್ವರು ಯುವಕರು ಗಾಯಗೊಂಡಿದ್ದು, ಮೃತಪಟ್ಟ ಯುವಕನನ್ನು ಬೆಂಗಳೂರಿನ ನೆಲಮಂಗಲ ನಿವಾಸಿ ಚಂದನ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೊಡಗು ಮೂಲದ ನಂದನ್‌, ಕೋಲಾರದ ಕೋದಂಡ, ಹಾಸನದ ಭರತ್‌, ಮಂಡ್ಯದ ಯೋಗೇಶ್‌ ಎನ್ನಲಾಗಿದೆ.

ಕುಂಸಿಯ ಕೆರೆಕೋಡಿ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ. ತಲೆಗೆ ಪೆಟ್ಟು ಬಿದ್ದಿದ್ದರಿಂದ ಕಾರು ಚಲಾಯಿಸುತ್ತಿದ್ದ ಚಂದನ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಐವರು ಬೆಂಗಳೂರಿನಿಂದ ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.