ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ದಾವಣಗೆರೆಯ ವಿದ್ಯಾನಗರ ಬಳಿ ಶನಿವಾರ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು, ಟಿಪ್ಪರ್ ಲಾರಿಗೆ ಡಿಕ್ಕಿಯಾದ ಪರಿಣಾಮ ನಡು ರಸ್ತೆಯಲ್ಲೇ ಕಾರು ಹೊತ್ತಿ ಉರಿದಿದ್ದು, ಕಾರು ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಯು ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ, ದಾವಣಗೆರೆಯಿಂದ ಬರುತ್ತಿದ್ದ ಟಿಪ್ಪರ್ ಲಾರಿಯ ಡೀಸೆಲ್ ಟ್ಯಾಂಕಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸೇರಿದಂತೆ ಕಾರಿನಲ್ಲಿದ್ದವರು ಸಣ್ಣ, ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಈ ಅಪಘಾತದಲ್ಲಿ ಕಾರಿಗೆ ಬೆಂಕಿ ಪೂರ್ಣವಾಗಿ ಆವರಿಸಿಕೊಂಡಿದ್ದು ಕಾರು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಟಿಪ್ಪರ್ ಲಾರಿ ಕೂಡ ಸ್ವಲ್ಪ ಸುಟ್ಟು ಹೋಗಿದೆ. ಇನ್ನು ವಿಷಯ ತಿಳಿದ ಅಗ್ನಿ ಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿತ್ತು.