ಲಿಕ್ಕರ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಹರಪನಹಳ್ಳಿ: ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ಬಳಿ ಇರುವ ಶಾಮನೂರು ಒಡೆತನದ ಮದ್ಯ ತಯಾರಿಕಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ಧಾಖಲಾಗಿದೆ. ಮದ್ಯ ತಯಾರಿಕಾ ಘಟಕದಲ್ಲಿ…

Fire at Liquor Factory vijayaprabha

ಹರಪನಹಳ್ಳಿ: ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ಬಳಿ ಇರುವ ಶಾಮನೂರು ಒಡೆತನದ ಮದ್ಯ ತಯಾರಿಕಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ಧಾಖಲಾಗಿದೆ.

ಮದ್ಯ ತಯಾರಿಕಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕಾರ್ಮಿಕ ರಘು ಎಂಬುವರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಈ ಕಾರ್ಖಾನೆಯು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮಗ ಮಾಜಿ ಶಾಸಕ ಎಸ್‌.ಎಸ್ ಮಲ್ಲಿಕಾರ್ಜುನ ಅವರ ಒಡೆತನಕ್ಕೆ ಸೇರಿದ್ದಾಗಿದ್ದು, ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಡಿಸ್ಟಿಲರಿ ಕಾರ್ಖಾನೆ ಮಾಲೀಕ ಟಿ.ಜಾನ್, ಕಂಪನಿ ವ್ಯವಸ್ಥಾಪಕ ಸೆಲ್ವರಾಜ್ ಮತ್ತು ರತ್ನಾಕರ್ ಎಂಬುವರ ವಿರುದ್ಧ ದೂರು ಧಾಖಲಾಗಿದೆ.

ಬೆಂಕಿ ಅವಘಡದಲ್ಲಿ ಸುಮಾರು 25 ಕೋಟಿ ರೂಪಾಯಿ ನಷ್ಟವಾಗಿದೆ ಎನ್ನಲಾಗಿದ್ದು, ಸುಮಾರು 22 ಕ್ಕೂ ಹೆಚ್ಚು ಮಧ್ಯ ತುಂಬಿದ ಟ್ಯಾಂಕ್ ಗಳು ಬೆಂಕಿಗೆ ಆಹುತಿಯಾಗಿದ್ದವು. ಈ ಸಂಬಂಧ ಹರಪನಹಳ್ಳಿ ತಾಲೂಕಿನ ಹಲುವಾಗಲು ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಖಲಾಗಿದೆ.

Vijayaprabha Mobile App free

ಇದನ್ನು ಓದಿ: ಶಾಮನೂರು ಒಡೆತನದ ಲಿಕ್ಕರ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ;ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.