Caste census | ಭಾರೀ ವಿವಾದಕ್ಕೆ ಕಾರಣವಾಗಿರುವ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ರಾಜ್ಯಾದ್ಯಂತ ಇಂದಿನಿಂದ ಪ್ರಾರಂಭವಾಗಲಿದೆ.
ಹೌದು, ಹಲವು ಸಮುದಾಯಗಳ ವಿರೋಧ, ಅಸಮಾಧಾನ, ಆಕ್ಷೇಪ, ಆತಂಕ, ಗೊಂದಲದ ನಡುವೆಯೇ ಜಾತಿ ಗಣತಿ ಆರಂಭವಾಗಲಿದೆ. ರಾಜ್ಯದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಾಡಿನ 7 ಕೋಟಿ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇಂದಿನಿಂದ ಅಕ್ಟೋಬರ್ 7ರವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ 7 ಕೋಟಿ ಕನ್ನಡಿಗರಿಂದ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ.
Caste census | ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು 2025ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ನಡೆಸಲಿದ್ದು, ಆಯೋಗದ ಸಿಬ್ಬಂದಿ ಹಾಗೂ ಶಿಕ್ಷಕರು ರಾಜ್ಯದ ಪ್ರತಿ ಮನೆಗೆ ಭೇಟಿ ನೀಡಿ ಈ ಸಮೀಕ್ಷೆ ನಡೆಸಲಿದ್ದು, ನಾಗರಿಕರು ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಮುಂತಾದ ದಾಖಲೆಗಳೊಂದಿಗೆ ಸಹಕರಿಸಬೇಕು.
ಆಧಾರ್‌ಗೆ ಲಿಂಕ್ ಆದ ಮೊಬೈಲ್‌ಗೆ OTP ಕಳುಹಿಸಲಾಗುವುದರಿಂದ, ಆಧಾರ್ ಲಿಂಕಿಂಗ್ ಖಚಿತಪಡಿಸಿಕೊಳ್ಳುವುದು ಕಡ್ಡಾಯ. 60 ಪ್ರಶ್ನೆಗಳ ಈ ಸಮೀಕ್ಷೆಯಲ್ಲಿ ಸರಿಯಾದ ಮಾಹಿತಿ ನೀಡಬೇಕು. ದೂರು ಅಥವಾ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಗೆ ಸಂಪರ್ಕಿಸಬಹುದು.




