ಜಾರಿಕಿಹೊಳಿ ಸಿಡಿ ಪ್ರಕರಣ: ಸಿಡಿಲೇಡಿ ಕುಟುಂಬಸ್ಥರಿಗೆ CCB ನೋಟಿಸ್!

ವಿಜಯಪುರ : ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರು ನೋಟಿಸ್ ಇಂದು ನೀಡಿದ್ದಾರೆ. ಹೌದು, ತಮ್ಮ…

CD-Lady-vijayaprabha-news

ವಿಜಯಪುರ : ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರು ನೋಟಿಸ್ ಇಂದು ನೀಡಿದ್ದಾರೆ.

ಹೌದು, ತಮ್ಮ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಸಿಡಿ ಯುವತಿಯ ಕುಟುಂಬಸ್ಥರು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ನಂತರ ಈ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. ಹೀಗಾಗಿ ಜಿಲ್ಲೆಯ ನಿಡಗುಂದಿಯಲ್ಲಿರುವ ಯುವತಿ ಕುಟುಂಬಸ್ಥರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಇನ್ನು, ರಾಸಲೀಲೆ ಸಿಡಿ ಪ್ರಕರಣದ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಆ ವಿಡಿಯೋದಲ್ಲಿರುವುದು ನಾನೇ ಎಂದು ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಇನ್ನು ಸಿಡಿ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಂತಾಗಿದೆ ಎನ್ನಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.