New Year Guidelines : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸವರ್ಷದ ಸಂಭ್ರಮಕ್ಕೆ ಕ್ಷಣಗಣನೆ ಶುರುವಾಗಿದ್ದು, ಆದರೆ ಈ ವೇಳೆ ಕೆಲವು ಪೊಲೀಸ್ ಇಲಾಖೆ ರೂಲ್ಸ್ ಗಳನ್ನು ಪ್ರಕಟಿಸಿದೆ.
ಹೌದು, ಎಂಜಿ ರೋಡ್, ಬ್ರಿಗೇಡ್ ರೋಡ್ ಹಾಗೂ ಕೋರಮಂಗಲ ಈಗಾಗಲೇ ಕಲರ್ ಕಲರ್ ಲೈಟಿಂಗ್‌ನೊಂದಿಗೆ ಜಗಮಗಿಸುತ್ತಿದೆ. ಇನ್ನು ಹೊಸವರ್ಷದ ಸಂಭ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಸಜ್ಜಾಗಿದೆ. ನ್ಯೂ ಇಯರ್ ಪಾರ್ಟಿಯಲ್ಲಿ ಕುಡಿದು ಟೈಟ್ ಆಗುವವರಿಗೆ ನಗರದಲ್ಲಿ ಬೆಡ್ ವ್ಯವಸ್ಥೆ ಮಾಡಲಾಗಿದೆ. ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಗರದಲ್ಲಿ ರಾಣಿ ಚೆನ್ನಮ್ಮ ಪಡೆ ಕಾರ್ಯ ನಿರ್ವಹಿಸಲಿದೆ.
ಇದನ್ನೂ ಓದಿ: New rules | ಹೊಸ ವರ್ಷಕ್ಕೆ ಹೊಸ ರೂಲ್ಸ್; ಏನೆಲ್ಲಾ ಬದಲಾವಣೆ? ಇಲ್ಲಿದೆ ಸಂಪೂರ್ಣ ಮಾಹಿತಿ
New Year Guidelines : ನ್ಯೂ ಇಯರ್ ಪಾರ್ಟಿ ಸಮಯದಲ್ಲಿ ಈ ತಪ್ಪು ಮಾಡಿದ್ರೆ ಜೈಲೂಟ ಫಿಕ್ಸ್
ಹೊಸವರ್ಷದ ಪ್ರಯುಕ್ತ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಇಂದಿರಾನಗರದಲ್ಲಿ ಆಚರಣೆಗೆ ಪೊಲೀಸ್ ಇಲಾಖೆ ಅನುಮತಿ ನೀಡಿದೆ.
ಆದರೆ ಈ ವೇಳೆ ಕೆಲವು ರೂಲ್ಸ್ ಗಳನ್ನು ಪ್ರಕಟಿಸಿದ್ದು, ಪೊಲೀಸ್ ನಿಯಮಗಳ ಪ್ರಕಾರ ರಾತ್ರಿ 1ರಿಂದ 2 ಗಂಟೆಯೊಳಗೆ ನ್ಯೂ ಇಯರ್ ಸೆಲೆಬ್ರೇಷನ್ ಮುಗಿಸಲು ತಿಳಿಸಲಾಗಿದೆ. ರಾತ್ರಿ 9 ಗಂಟೆ ನಂತರ ನಗರದ ಪ್ರಮುಖ ಫ್ಲೈಓವರ್ಗಳು ಬಂದ್ ಆಗಲಿದ್ದು, ಇನ್ನು ಕುಡಿದ ಮತ್ತಿನಲ್ಲಿ ಡ್ರಿಂಕ್ ಆಂಡ್ ಡ್ರೈವ್, ವೀಲಿಂಗ್ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆಯನ್ನು ಪೊಲೀಸ್ ಇಲಾಖೆ ನೀಡಿದೆ.
ಇದನ್ನೂ ಓದಿ: ವರ್ಷದ ಮೊದಲ ತಿಂಗಳು ಜನವರಿಯಲ್ಲಿ ಆಚರಿಸಲಾಗುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ಹಬ್ಬಗಳು
New Year Guidelines : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಇಲ್ಲಿದೆ ಮಾರ್ಗಸೂಚಿ..
- ಹೊಸ ವರ್ಷಾಚರಣೆ ಹಿನ್ನಲೆ ಸಾರ್ವಜನಿಕರು ತಮ್ಮ ಸುರಕ್ಷತೆ ಬಗ್ಗೆ ಜಾಗೃತಿ ವಹಿಸಬೇಕು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.
- ಬೇರೆಯವರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು.
- ಯಾವುದೇ ಕಾರಣಕ್ಕೂ ಸಂಭ್ರಮಾಚರಣೆಯಲ್ಲಿ ಪಟಾಕಿಗಳನ್ನು ಸಿಡಿಸಬಾರದು.
- ಅತಿವೇಗ, ಅಜಾಗರೂಕತೆಯಿಂದ ವಾಹನ ಚಲಾಯಿಸಬಾರದು.
- ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸಬಾರದು.
- ಮೋಜಿಗಾಗಿ ತುರ್ತು ಕರೆಗಳಿಗೆ ಸಂಪರ್ಕಿಸಬಾರದು.
- ಅನಾವಶ್ಯಕವಾಗಿ ಗುಂಪುಗೂಡಬಾರದು ಎಂದು ಬೆಂಗಳೂರು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಭದ್ರತೆಗೆ 11,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ




