ನವದೆಹಲಿ : ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಗೃಹ ಸಚಿವ ಮತ್ತು ಮಾಜಿ ಸಂಸದ ಬುಟಾ ಸಿಂಗ್ (86) ಅವರು ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಬುಟಾ ಸಿಂಗ್ ಅವರು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಚಿಕಿತ್ಸ್ಯೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಬುಟಾ ಸಿಂಗ್ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಸಂಪುಟದಲ್ಲಿ ಸೇವೆ ಸಲ್ಲಿಸಿದ್ದರು. ಬುಟಾ ಸಿಂಗ್ ಅವರು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು ಮತ್ತು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಮುಖ್ಯಸ್ಥರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರು.ಕೇಂದ್ರದ ಮಾಜಿ ಗೃಹ ಸಚಿವ ಬುಟಾ ಸಿಂಗ್ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.