ನವದೆಹಲಿ: ಕೊರೋನಾದಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಪಿಎಂ-ಕೇರ್ಸ್ ನಿಂದ ನೆರವು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ.
ಹೌದು, ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ 18 ವರ್ಷ ತುಂಬುತ್ತಲೇ ಪ್ರತಿ ತಿಂಗಳು ಸ್ಟೈಫಂಡ್ ನೀಡಲಾಗುವುದು. ನಂತರ 23 ವರ್ಷ ತುಂಬಿದ ಮೇಲೆ ಪಿಎಂ ಕೇರ್ಸ್ ನಿಂದ 10 ಲಕ್ಷ ರೂಗಳ ನಗದು ಹಣ ನೀಡಲಾಗುವುದು ಎಂದು ಪ್ರಧಾನಿ ಕಚೇರಿ ಬಿಡುಗಡೆಗೊಳಿಸಿರುವ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು, ಸಿಎಂ ಯಡಿಯೂರಪ್ಪ ಅವರ ರಾಜ್ಯ ಸರ್ಕಾರ ಅನಾಥ ಮಕ್ಕಳಿಗೆ ಪ್ರತಿ ತಿಂಗಳು 3500 ರೂ. ಘೋಷಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.