ನವದೆಹಲಿ: ದೇಶದಾತ್ಯಂತ ಇರುವ ಕೊರೋನಾ ಅಬ್ಬರದ ಕಾರಣದಿಂದ ಶಾಲಾ ತರಗತಿಗಳು ನಡೆಯದ ಕಾರಣ, ಮಧ್ಯಾಹ್ನದ ಬಿಸಿಯೂಟ ಯೋಜನೆ ಬದಲು ವಿದ್ಯಾರ್ಥಿಗಳಿಗೆ ನಗದು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಹೌದು, ಮಧ್ಯಾಹ್ನದ ಬಿಸಿಯೂಟದ ಯೋಜನೆಯಿಂದ ದೇಶದ 11.8 ಕೋಟಿ ವಿದ್ಯಾರ್ಥಿಗಳಿಗೆ ವಿತ್ತೀಯ ನೆರವು ನೀಡುವ ಪ್ರಸ್ತಾಪಕ್ಕೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ಅನುಮೋದನೆ ನೀಡಿದ್ದಾರೆ.
ಇದರ ಜೊತೆಗೆ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಯಿಂದ 80 ಕೋಟಿ ಫಲಾನುಭವಿಗಳಿಗೆ ತಿಂಗಳಿಗೆ 5 ಕೆ.ಜಿ ಉಚಿತ ಆಹಾರ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.