ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದ್ದು, ಅಡುಗೆ ಎಣ್ಣೆಗಳ ಬೆಲೆಯನ್ನು ಲೀಟರ್‌ಗೆ ₹ 10 – ₹ 12ರ ತನಕ ಇಳಿಕೆ ಮಾಡಲು ಕ್ರಮ ಕೈಗೊಂಡಿದ್ದು, 2 ವಾರಗಳಲ್ಲಿ ಬೆಲೆ ಕಡಿಮೆ ಆಗಲಿದೆ ಎಂದು ಸರ್ಕಾರ ಹೇಳಿದೆ.
ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದೊಂದಿಗಿನ ಸಭೆಯ ಬಳಿಕ ಖಾದ್ಯ ತೈಲ ಸಂಸ್ಕರಣೆ ಮತ್ತು ತಯಾರಕ ಕಂಪನಿಗಳು, ಜಾಗತಿಕ ಬೆಲೆ ಇಳಿಕೆ ಲಾಭವನ್ನು ಗ್ರಾಹಕರಿಗೆ ನೀಡಲಿದ್ದಾರೆ. ತೈಲದ ಮೇಲೆ 10-12 ರೂ.ನಷ್ಟು ಬೆಲೆ ಕಡಿತಗೊಳಿಸಲು ಒಪ್ಪಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಇಳಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಅಡುಗೆ ಎಣ್ಣೆ ಉತ್ಪಾದಕರೊಂದಿಗೆ ಮಾತುಕತೆ ನಡೆಸಿ ಬೆಲೆ ಇಳಿಕೆ ಮಾಡುವಂತೆ ಸೂಚನೆ ನೀಡಿದೆ. ಇನ್ನು, ಕೇಂದ್ರ ಸರ್ಕಾರ 3 ಬಾರಿ ಅಡುಗೆ ಎಣ್ಣೆ ತಯಾರಕ ಕಂಪನಿಗಳೊಂದಿಗೆ ಸಭೆ ನಡೆಸಿದೆ.