ನವದೆಹಲಿ: ಮೋದಿ ಸರ್ಕಾರ ಇತ್ತೀಚೆಗೆ ಪಿಎಂ ಕಿಸಾನ್ ಯೋಜನೆ ಕುರಿತು ಮಹತ್ವದ ಪ್ರಕಟಣೆ ನೀಡಿದ್ದು, ಪಿಎಂ ಕಿಸಾನ್ ಯೋಜನೆಯಡಿ ಒದಗಿಸುವ ಹಣವನ್ನು ಹೆಚ್ಚಿಸುವ ಯಾವುದೇ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದು, ಎಂದಿನಂತೆ ರೈತರಿಗೆ 6,000 ರೂ. ಸಿಗುತ್ತದೆ ಎಂದು ತಿಳಿಸಿದೆ.
ಕೇಂದ್ರ ಸರ್ಕಾರವು ರೈತರಿಗಾಗಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಎನ್ನುವ ವಿಶೇಷ ಯೋಜನೆಯನ್ನು ಜಾರಿಗೆ ತಂದಿದ್ದು, ಅರ್ಹತೆ ಪಡೆದವರಿಗೆ ಮೋದಿ ಸರ್ಕಾರ ಈ ಯೋಜನೆಯಡಿ ಪ್ರತಿವರ್ಷ ನಿರ್ದಿಷ್ಟ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಲ್ಲಿ ಜಮಾ ಮಾಡುತ್ತಿದೆ. ಇದರಿಂದ ರೈತರಿಗೆ ಅನುಕೂಲವಾಗುತ್ತಿದೆ.
ಪಿಎಂ ಕಿಸಾನ್ ಅಡಿಯಲ್ಲಿ ಕೇಂದ್ರ ಸರ್ಕಾರ ವಾರ್ಷಿಕವಾಗಿ 6,000 ರೂ. ಹಣವನ್ನು ಏಕಕಾಲಕ್ಕಿಂತ ಮೂರು ಕಂತುಗಳಲ್ಲಿ, ಪ್ರತಿ ಕಂತಿನಡಿ 2,000 ರೂಗಳನ್ನು ರೈತರ ಖಾತೆಗಳಲ್ಲಿ ಜಮಾ ಮಾಡಲಾಗುತ್ತಿದೆ. ಈಗಾಗಲೇ 7 ಕಂತುಗಳ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ.
ಮುಂದಿನ ದಿನಗಳಲ್ಲಿ 8 ನೇ ಕಂತಿನ ಹಣ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ. ಆದರೆ ಈಗ ಕೇಂದ್ರ ಸರ್ಕಾರ ಈ ಯೋಜನೆಯ ಬಗ್ಗೆ ಮಹತ್ವದ ಪ್ರಕಟಣೆ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ ರೈತರಿಗೆ ನೀಡಲಾಗುವ 6,000 ರೂ. ಹಣವನ್ನು ಹೆಚ್ಚಿಸುವ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಬಹಿರಂಗಪಡಿಸಿದ್ದು, ಮೋದಿ ಸರ್ಕಾರ ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ನೀಡುವ ಹಣದ ಮೊತ್ತವನ್ನು ಹೆಚ್ಚಿಸುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ಕೇಂದ್ರ ಸರ್ಕಾರ ಯೋಜನೆಯಡಿ ರೈತರಿಗೆ ನೀಡುವ ಹಣದ ಮೊತ್ತವನ್ನು ಹೆಚ್ಚಿಸುವ ಪ್ರಸ್ತಾಪವಿಲ್ಲ ಎಂದು ಮಹತ್ವದ ಪ್ರಕಟಣೆ ನೀಡಿದೆ.
ಇದನ್ನು ಓದಿ: ಒಳ್ಳೆಯ ಸುದ್ದಿ: ಮಾರ್ಚ್ ಅಂತ್ಯದ ವೇಳೆಗೆ ರೈತರ ಖಾತೆಗೆ ಮತ್ತೆ 2,000 ಹಣ; ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಈಗೆ ಪರಿಶೀಲಿಸಿ!