ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತಿಗಾಗಿ ಕಾಯುತ್ತಿರುವ ದೇಶದ ಲಕ್ಷಾಂತರ ರೈತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರ ರೈತರ ಖಾತೆಗೆ ಸೆಪ್ಟೆಂಬರ್ 30ರೊಳಗೆ 2000 ರೂ ಹಣವನ್ನು ಜಮೆ ಮಾಡಬಹುದು ಎಂದು ಹೇಳಲಾಗಿದೆ.
ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಈ- ಕೆವೈಸಿ ನವೀಕರಿಸಲು ಆಗಸ್ಟ್ 31 ಕೊನೆಯ ದಿನವಾಗಿತ್ತು. ಆದರೆ ಇದನ್ನು ವಿಸ್ತರಿಸಲಾಗಿದ್ದು, ರೈತರು ವೆಬ್ ಸೈಟ್ pmkisan.gov.in ನಲ್ಲಿ ಕೆವೈಸಿ ಮಾಡಬಹುದು.
ರೈತರ ಆದಾಯ ಹೆಚ್ಚಿಸಲು ಸರ್ಕಾರ, ಈ ವಿಶೇಷ ಯೋಜನೆ ಜಾರಿಗೊಳಿಸಿದ್ದು, ತಲಾ 2000 ರೂ.ಗಳಂತೆ 3 ಕಂತುಗಳಲ್ಲಿ ವಾರ್ಷಿಕ 6000 ರೂಪಾಯಿಗಳನ್ನು ವರ್ಗಾಯಿಸಲಿದೆ. ಹೆಚ್ಚಿನ ಮಾಹಿತಿಗೆ https://pmkisan.gov.in/ಗೆ ಸಂಪರ್ಕಿಸಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.