ಹುಬ್ಬಳ್ಳಿ: ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ಸಾವನ್ನಪ್ಪಿದ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಬೆಚ್ಚಿಬೀಳಿಸುವ ಮಾಹಿತಿ ಹೊರಬಿದ್ದಿದೆ.
ಹೌದು, ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಮರಣೋತ್ತರ ಪರೀಕ್ಷೆಯನ್ನು ಕಿಮ್ಸ್ ವಿಧಿ ವಿಜ್ಞಾನ ವಿಭಾಗದ ಡಾ.ಸುನೀಲ್ ಬಿರಾದಾರ ಹಾಗೂ ಸಿಬ್ಬಂದಿ ನಡೆಸಿದ್ದು, ಕುತ್ತಿಗೆಯಲ್ಲಿ 12 ಇಂಚು ಉದ್ದ, 3,4 ಇಂಚು ಆಳದ ಚಾಕುವಿನಿಂದ ಕೊಯ್ದಿದ್ದು, ದೇಹದ 42 ಕಡೆಗಳಲ್ಲಿ ಚಾಕುವಿನಿಂದ ಇರಿಯಲಾಗಿದ್ದು, ಕೆಲವೆಡೆ 2,3 ಬಾರಿ ಚೂಚ್ಚಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು, ಚಂದ್ರಶೇಖರ ಗುರೂಜಿ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಕೆಲವೇ ಕ್ಷಣದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.