ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಗುಜರಿ ನೀತಿಯಿಂದಾಗಿ ರಾಜ್ಯದಲ್ಲಿ 15 ವರ್ಷ ಸವೆಸಿರುವ ಸುಮಾರು 90 ಲಕ್ಷ ವಾಹನಗಳು ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಬೇಕಾಗಿದೆ. ಈ ನಿಮಯ ಮೊದಲ ಬಾರಿಗೆ ಅನುಷ್ಠಾನ ಮಾಡುತ್ತಿರುವುದರಿಂದ ಒಂದಷ್ಟು ರಿಯಾಯತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಹೌದು, ಕೇಂದ್ರ ಸರ್ಕಾರ ಗುಜರಿ ನೀತಿಯಲ್ಲಿ ರಿಯಾಯತಿ ನೀಡಲು ಮುಂದಾಗಿದ್ದು, ಈ ವಾಹನಗಳಿಂದ ವಾಯುಮಾಲಿನ್ಯ ಉಂಟಾಗುವುದಿಲ್ಲ ಎಂದು ಫಿಟ್‌ನೆಸ್ ಸಾಬೀತಾದರೆ, ಸಾರಿಗೆ ಇಲಾಖೆಯಿಂದ ಮತ್ತೆ ಪರವಾನಿಗೆ ಸಿಗಲಿದೆ. ರಾಜ್ಯದಲ್ಲಿ 2022ರ ಮಾರ್ಚ್ ವೇಳೆಗೆ 15 ವರ್ಷ ಮುಗಿದಿರುವ 51.9 ಲಕ್ಷ ದ್ವಿಚಕ್ರ ವಾಹನಗಳಿವೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.