ಬಳ್ಳಾರಿ,ಫೆ.23: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ನನ್ನ ಬದಲಾವಣೆ ಮಾಡುವುದು ಮುಖ್ಯಮಂತ್ರಿಗಳ ವಿವೇಚನಗೆ ಬಿಟ್ಟಿದ್ದು ಎಂದು ಜಿಲ್ಲಾ ಉಸ್ತುವಾರಿ, ಸಚಿವ ಆನಂದಸಿಂಗ್ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನನ್ನನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿಯಿಂದ ಬದಲಾಯಿಸಿ ಸಮಾಜಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ನೀಡಿದರೇ ಸ್ವತಃ ನಾನೇ ಸ್ವಾಗತಿಸುತ್ತೇನೆ;ಒಂದು ವೇಳೆ ಅವರು ಮತ್ತು ನನ್ನನ್ನು ಬಿಟ್ಟು ಬೇರೆಯವರನ್ನು ನಿಯೋಜಿಸದರೇ ಮುಖ್ಯಮಂತ್ರಿಗಳ ಬಳಿ ವಿಚಾರಿಸುತ್ತೇನೆ ಎಂದರು. ಶಾಸಕ ಸೋಮಶೇಖರ ರೆಡ್ಡಿ ಅವರನ್ನು ಸಚಿವಸ್ಥಾನ ನೀಡಿ ಜಿಲ್ಲಾ ಉಸ್ತುವಾರಿ ನೀಡಿದರೇ ಆಗಲಿ ನನ್ನ ಅಭ್ಯಂತರವೇನಿಲ್ಲ ಎಂದರು.
ಹೊಸಪೇಟೆ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ 4 ವರ್ಷಗಳಿಂದ ನಿಧಾನಗತಿಯಲ್ಲಿ ಸಾಗಿದ್ದು,ಇತ್ತೀಚೆಗೆ ನಡೆದ ಸಭೆಯಲ್ಲಿ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರೊಂದಿಗೆ ಚರ್ಚಿಸಲಾಗಿದ್ದು, ಮುಂದಿನ ಮಾರ್ಚ್‍ವೊಳಗೆ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ ಎಂದರು. ಸರಕಾರವು ಆಡಳಿತಾತ್ಮಕ ಕಾರಣಕ್ಕಾಗಿ ಜಿಲ್ಲೆಯನ್ನು ವಿಭವಜಿಸಿ ಅಧಿಸೂಚನೆ ಹೊರಡಿಸಿ ಈ ನಿರ್ಧಾರ ಕೈಗೊಂಡಿದೆ;ನ್ಯಾಯಾಲಯದ ಎಕ್ಸೆಪ್ಟ್ ಮಾಡುವುದಿಲ್ಲ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಸಂಸದರಾದ ವೈ ದೇವೇಂದ್ರಪ್ಪ, ಜಿಪಂ ಸಿಇಒ ಕೆ.ಆರ್.ನಂದಿನಿ ಮತ್ತಿತರರು ಉಪಸ್ಥಿತರಿದ್ದರು.