By-election results today : ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.
ಸಂಡೂರಿನಲ್ಲಿ NDA ಅಭ್ಯರ್ಥಿಯಾಗಿ ಬಂಗಾರು ಹನುಮಂತು, ಕಾಂಗ್ರೆಸ್‌ನಿಂದ E. ಅನ್ನಪೂರ್ಣ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ CP ಯೋಗೇಶ್ವರ್, NDAಯಿಂದ ನಿಖಿಲ್ ಕುಮಾರಸ್ವಾಮಿ, ಶಿಗ್ಗಾಂವಿಯಲ್ಲಿ NDA ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ, ಕಾಂಗ್ರೆಸ್‌ನಿಂದ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸೇರಿ 45 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಇದನ್ನೂ ಓದಿ: ನಾಳೆಯೇ ಉಪ ಚುನಾವಣೆ ಫಲಿತಾಂಶ; ಚನ್ನಪಟ್ಟಣದಲ್ಲಿ ಯಾರಿಗೆ ವಿಜಯಮಾಲೆ?
ಮೂರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ 3 ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಅಭ್ಯರ್ಥಿಗಳ ಭವಿಷ್ಯ ತಿಳಿದು ಬರಲಿದೆ. ರಾಜ್ಯದ ಮೂರು ಕ್ಷೇತ್ರಗಳಿಗೆ ನವೆಂಬರ್ 13 ರಂದು ಮತದಾನ ನಡೆದಿತ್ತು.
By-election results today : ಬೆಳಗ್ಗೆ 7:30ಕ್ಕೆ ಸ್ಟ್ರಾಂಗ್ ರೂಮ್ ಓಪನ್.. ಮೊದಲು ಅಂಚೆ ಮತ ಎಣಿಕೆ
ಚನ್ನಪಟ್ಟಣದಲ್ಲಿ ಬೆಳಗ್ಗೆ 7:30ಕ್ಕೆ ಅಂಚೆ ಮತ ಎಣಿಕೆ, 8 ಗಂಟೆಗೆ EVM ಮತಗಳ ಎಣಿಕೆ ಕಾರ್ಯ ಆರಂಭವಾಗಲಿದ್ದು, ರಾಮನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಒಟ್ಟು 20 ಸುತ್ತು ಕೌಂಟಿಂಗ್ ಇರಲಿದೆ.
ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ಹಾವೇರಿ ತಾ. ದೇವಗಿರಿ ಬಳಿ ಇರುವ ಕಾಲೇಜಿನಲ್ಲಿ ನಡೆಯಲಿದ್ದು, 8ಕ್ಕೆ ಅಂಚೆ ಮತ ಎಣಿಕೆ ಆರಂಭವಾಗಲಿದೆ. ಸಂಡೂರು ಕ್ಷೇತ್ರದ ಮತಎಣಿಕೆ ಕೂಡ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನಡೆಯಲಿದೆ.
ಇದನ್ನೂ ಓದಿ: Eating Food | ನೆಲದ ಮೇಲೆ ಕುಳಿತು ಊಟ ಮಾಡಿದರೆ ಇವೆ ಇಷ್ಟೆಲ್ಲಾ ಪ್ರಯೋಜನಗಳು