ಛತ್ತೀಸ್ಗಢ: ರಾಂಗ್ ಸೈಡ್ ನಿಂದ ಬಂದ ಟ್ರಕ್, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ.
ಭಾನುಪ್ರತಾಪಪುರ-ದಳ್ಳಿರಾಜರ ರಸ್ತೆಯ ಚೌರಪಾವಡ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ 6 ಜನರು ಮ್ರತಪಟ್ಟಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಜನಂದಗಢ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ದುಂಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಕಾರಿನ ಒಳಗಡೆ ಸಿಲುಕಿಕೊಂಡಿದ್ದ ಮೃತರನ್ನು ಹೊರತೆಗೆಯಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.