ದುಬೈ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 29ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 20 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
168 ರನ್ ಗುರಿಯನ್ನು ಬೆನ್ನಟ್ಟಿದ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟದೊಂದಿಗೆ 147 ರನ್ ಗಳಿಸಿ 20 ರನ್ ಗಳಿಂದ ಸೋಲಿಗೆ ಶರಣಾಯಿತು. ಸನ್ ರೈಸರ್ಸ್ ಪರ, ಜಾನಿ ಬೆರ್ಸ್ಟ್ರೋ-23, ಕೇನ್ ವಿಲಿಯಮ್ಸನ್-57, ಪ್ರಿಯಂ ಗರ್ಗ್-16 ರನ್ ಗಳಿಸಿದರು. ಚೆನ್ನೈ ಸೂಪರ್ ಕಿಂಗ್ಸ್ ಪರ, ಡ್ವೇನ್ ಬ್ರಾವೊ, ಕರಣ್ ಶರ್ಮಾ ತಲಾ 2 ವಿಕೆಟ್, ಶಾರ್ದುಲ್ ಠಾಕೂರ್, ಸ್ಯಾಮ್ ಕರಣ್, ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಇದಕ್ಕೂ ಮುಂಚೆ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಆಟಗಾರನಾಗಿ ಬಡ್ತಿ ಪಡೆದ ಸ್ಯಾಮ್ ಕರಣ್-31, ವ್ಯಾಟ್ಸನ್-42, ಅಂಬಟಿ ರಾಯುಡು-41, ದೋನಿ-21, ಜಡೇಜಾ-25 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತು. ಸನ್ ರೈಸರ್ಸ್ ಪರ, ಸಂದೀಪ್ ಶರ್ಮಾ, ನಟರಾಜನ್ ಹಾಗು ಖಲೀಲ್ ಅಹಮದ್ ತಲಾ 2 ವಿಕೆಟ್, ವಿಕೆಟ್ ಪಡೆದರು.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಅಮೋಘ ಆಲ್ರೌಂಡರ್ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.
ಇದನ್ನು ಓದಿ: ಉಪ ಚುನಾವಣೆ: ಸುಪ್ರಿಂ ಕೋರ್ಟ್ ತೀರ್ಪು ಬೆನ್ನಲ್ಲೇ ಬಿಜೆಪಿಯಿಂದ ಟಿಕೆಟ್ ಘೋಷಣೆ




