ಋತುರಾಜ್ ಅರ್ಧ ಶತಕ; ಕೆಕೆಆರ್ ವಿರುದ್ದ ಚೆನ್ನೈಗೆ 6 ವಿಕೆಟ್ ಗೆಲುವು

ದುಬೈ: ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಡೆದ ಐಪಿಎಲ್ 13ನೇ ಆವೃತ್ತಿಯ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್‌ ರೈಡರ್ಸ್ ವಿರುದ್ಧ 6 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಟಾಸ್ ಸೋತು…

ದುಬೈ: ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಡೆದ ಐಪಿಎಲ್ 13ನೇ ಆವೃತ್ತಿಯ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್‌ ರೈಡರ್ಸ್ ವಿರುದ್ಧ 6 ವಿಕೆಟ್‌ಗಳಿಂದ ಗೆದ್ದು ಬೀಗಿದೆ.

ಟಾಸ್ ಸೋತು ಬ್ಯಾಟಿಂಗ್ ಮೊದಲು ಮಾಡಿದ್ದ ಕೆಕೆಆರ್ 173 ರನ್‌ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಚೆನ್ನೈ ಕೊನೆಯ 4 ವಿಕೆಟ್‌ ನಷ್ಟಕ್ಕೆ 178 ರನ್‌ ಗಳಿಸಿ ಗೆಲುವು ದಾಖಲಿಸಿದೆ.

ಚೆನ್ನೈ ಪರ ಋತುರಾಜ್ ಗಾಯಕ್ವಾಡ್ 72 ರನ್‌ (53 ಎಸೆತ, 6 ಬೌಂಡರಿ, 2 ಸಿಕ್ಸರ್), ಅಂಬಾಟಿ ರಾಯುಡು 38 ರನ್ (20 ಎಸೆತ, 5 ಬೌಂಡರಿ, 1 ಸಿಕ್ಸ್) ಹಾಗೂ ಶೇನ್ ವಾಟ್ಸನ್ 14 ರನ್ (19 ಎಸೆತ, 1 ಬೌಂಡರಿ, 1 ಸಿಕ್ಸ್) ದಾಖಲಿಸಿದರೆ, ನಾಯಕ ಎಂ.ಎಸ್‌.ಧೋನಿ ಕೇವಲ ಒಂದು ರನ್‌ಗೆ ವಿಕೆಟ್‌ ಒಪ್ಪಿಸಿದರು. ಕೊನೆಯಲ್ಲಿ ಸ್ಯಾಮ್ ಕುರ್ರನ್ 13 ರನ್ ಹಾಗೂ ರವೀಂದ್ರ ಜಡೇಜಾ 31 ರನ್‌ (11 ಎಸೆತ, 2 ಬೌಂಡರಿ, 3 ಸಿಕ್ಸರ್) ಗಳಿಸಿದರು. ಕೆಕೆಆರ್ ಪರ ಪ್ಯಾಟ್ ಕಮ್ಮಿನ್ಸ್, ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಪಡೆದರು.

Vijayaprabha Mobile App free

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಕೆಕೆಆರ್ ನಿತೀಶ್ ರಾಣಾ 87 ರನ್‌ (61 ಎಸೆತ, 10 ಬೌಂಡರಿ, 4 ಸಿಕ್ಸರ್), ಶುಭ್‌ಮನ್ ಗಿಲ್ 26 ರನ್ (17 ಎಸೆತ, 4 ಬೌಂಡರಿ), ದಿನೇಶ್ ಕಾರ್ತಿಕ್ 21 ರನ್ (10 ಎಸೆತ, 3 ಬೌಂಡರಿ ) ಸಹಾಯದಿಂದ 5 ವಿಕೆಟ್‌ ನಷ್ಟಕ್ಕೆ 172 ರನ್‌ ಗಳಿಸಿತು. ಚೆನ್ನೈ ಪರ ಲುಂಗಿ ಎಂಗಿಡಿ 2 ವಿಕೆಟ್, ಜಡೇಜಾ, ಕರಣ್ ಶರ್ಮಾ, ಹಾಗು ಸಾಂಟ್ನರ್ ತಲಾ 1 ವಿಕೆಟ್ ಪಡೆದರು.

ಚೆನ್ನೈ ಸೂಪರ್ ಕಿಂಗ್ಸ್ ಪರ ಅದ್ಬುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಋತುರಾಜ್ ಗಾಯಕ್ವಾಡ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.