ರೈತರ ಮಕ್ಕಳಿಗೆ ಸಿಹಿಸುದ್ದಿ: ರೈತ ಕುಟುಂಬದ ಎಲ್ಲಾ ಮಕ್ಕಳೂ ಇದಕ್ಕೆ ಅರ್ಹರು!

ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ವಿದ್ಯಾರ್ಥಿಗಳಿಗೆ ಮಹತ್ವಕಾಂಕ್ಷೆಯ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದೆ. ಹೌದು, 2021-22 ನೇ ಸಾಲಿಗೆ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು…

Farmers vijayaprabha news

ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ವಿದ್ಯಾರ್ಥಿಗಳಿಗೆ ಮಹತ್ವಕಾಂಕ್ಷೆಯ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದೆ.

ಹೌದು, 2021-22 ನೇ ಸಾಲಿಗೆ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಅಧಿಕೃತವಾಗಿ ನೊಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‍ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ(ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‍ಫರ್-ಡಿಬಿಟಿ) ಪದ್ಧತಿಯ ಮೂಲಕ ರೂ.2000/- ದಿಂದ ರೂ.11000/- ವರೆಗೆ 2021-22ನೇ ಆರ್ಥಿಕ ವರ್ಷದ ಸಾಲಿನಿಂದ ಜಾರಿಗೆ ಬರುವಂತೆ ಶಿಷ್ಯವೇತನದ ಹಣದ ಮೊತ್ತವನ್ನು ವಾರ್ಷಿಕ ಶಿಷ್ಯವೇತನದ ರೂಪದಲ್ಲಿ ಒದಗಿಸಲು ಮತ್ತು ಪಾವತಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿರುತ್ತದೆ.

ದಿನಾಂಕ:10.12.2021 ಮತ್ತು 31-12-2021 ರ ಸರ್ಕಾರದ ಮಾರ್ಪಾಡು ಆದೇಶ ದನ್ವಯ ರೈತ ಕುಟುಂಬದ ಎಲ್ಲಾ ಮಕ್ಕಳು ಇತರೆ ಯಾವುದೇ ವಿದ್ಯಾರ್ಥಿವೇತನ ಪಡೆಯುತ್ತಿದ್ದರೂ ಕೂಡ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ವೇತನ ಪಡೆಯಲು ಅರ್ಹರಾಗಿತ್ತಾರೆ.

Vijayaprabha Mobile App free

ಇನ್ನು, ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಪ್ರೌಢಶಿಕ್ಷಣ (8 ರಿಂದ 10 ನೇ ತರಗತಿ ವರೆಗೆ) ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೆ 2021-22 ನೇ ಆರ್ಥಿಕ ವರ್ಷದಿಂದ ವಾರ್ಷಿಕವಾಗಿ ರೂ.2000/- ಗಳ ವಿಧ್ಯಾರ್ಥಿ ವೇತನ ಸೌಲಭ್ಯ ಕೂಡ ವಿಸ್ತರಣೆ ಮಾಡಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.