ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದಿನಿಂದ ದತ್ತಮಾಲಾ ಅಭಿಯಾನ ಆರಂಭವಾಗಿದೆ. ಶ್ರೀರಾಮಸೇನೆ ನೇತೃತ್ವದಲ್ಲಿ ನಡೆಯುವ 21ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಇಂದಿನಿಂದ ಚಾಲನೆ ಸಿಕ್ಕಿದ್ದು, ಕರ್ನಾಟಕದ ಅಯೋಧ್ಯೆ ದತ್ತಪೀಠದಲ್ಲಿ ಈ ದತ್ತಮಾಲಾ ಅಭಿಯಾನ ನಡೆಯಲಿದೆ.
ಚಿಕ್ಕಮಗಳೂರು ನಗರದ ಶಂಕರಮಠದಲ್ಲಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿ ಹಲವರು ಮಾಲಾಧಾರಣೆ ಮಾಡುವ ಮೂಲಕ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇಂದಿನಿಂದ ನವೆಂಬರ್ 10ರ ವರೆಗೆ ದತ್ತಮಾಲಾ ಅಭಿಯಾನ ನಡೆಯಲಿದ್ದು, ಹಿಂದೂಗಳಿಗೆ ದತ್ತಪೀಠ ನೀಡಬೇಕು ಎಂಬ ಪ್ರಮುಖ ಆಗ್ರಹದೊಂದಿಗೆ ದತ್ತಮಾಲಾ ಅಭಿಯಾನ ನಡೆಯಲಿದೆ.
2 ದಶಕದ ನಂತರ ಬಿಜೆಪಿ, ಹಿಂದೂ ಪರ ಸಂಘಟನೆಯಿಂದ ಈ ಬಾರಿಯ ಅಭಿಯಾನಕ್ಕೆ ಸಾಥ್ ಸಿಕ್ಕಿದ್ದು, ಒಗ್ಗಟ್ಟಿನ ಮಂತ್ರದೊಂದಿಗೆ ಈ ಬಾರಿ ದತ್ತಮಾಲಾ ಅಭಿಯಾನ ನಡೆಯಲಿದೆ. ಜಿಲ್ಲೆ ಸೇರಿ ರಾಜ್ಯಾದ್ಯಂತ ಇಂದು ದತ್ತಮಾಲಾಧಾರಣೆ ನಡೆಯಲಿದೆ.