ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಹಳೇ ಟಕ್ಕಳಕಿ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜಿಸಿ ಹಿಂತಿರುಗುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ.
ಮೃತ ಮಗುವನ್ನು ನಿಹಾಲ್ ಮಾಂಡೆಪ್ಪಗೋಳೆ ಎಂದು ಗುರುತಿಸಲಾಗಿದ್ದು, ನಿಹಾಲ್ ಮೂತ್ರ ವಿಸರ್ಜಿಸಲು ಹೋಗುತ್ತಿದ್ದಾಗ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.