ರಾಜ್ಯದ ಬೆಳಗಾವಿ, ವಿಜಯಪುರ, ಧಾರವಾಡ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ಹಲವೆಡೆ ಮಕ್ಕಳ ಕಳ್ಳರು ಬಂದಿದ್ದಾರೆಂಬ ವದಂತಿ ಹಬ್ಬಿದ್ದು, ಈ ಹಿನ್ನೆಲೆಯಲ್ಲಿ ಗೃಹ ಇಲಾಖೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.
ಹೌದು, ಯಾರಾದರೂ ಅನುಮಾನಾಸ್ಪದವಾಗಿ ಕಂಡುಬಂದಲ್ಲಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಿ. ಸ್ಥಳಕ್ಕೆ ಪೊಲೀಸರು ಆಗಮಿಸಲಿದ್ದು, ವಿಚಾರಣೆ ನಡೆಸುತ್ತಾರೆ. ಸದ್ಯ ಕೆಲವೆಡೆ ಸಿಕ್ಕಿರುವವರು ಅಲೆಮಾರಿಗಳು. ಅಮಾಯಕರ ಮೇಲೆ ಹಲ್ಲೆ ಮಾಡುವುದು ಕಾನೂನುಬಾಹಿರ. ವದಂತಿ ಹಬ್ಬಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆಂದು ಗೃಹ ಇಲಾಖೆ ತಿಳಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.