ವಿಜಯಪುರ: ವಿಜಯಪುರ ಜಿಲ್ಲೆಯ ತಾಳಿಕೋಟೆಯ ಚೋಕಾರಿ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳನ್ನು ಪಿಕ್‌ನಿಕ್‌ಗೆ ಕರೆದುಕೊಂಡು ಹೊರಟಿದ್ದ ಟೆಂಪೋ ಪಲ್ಟಿಯಾದ ದುರ್ಘಟನೆ ನಡೆದಿದೆ.
ಹೌದು, 30ಕ್ಕೂ ಹೆಚ್ಚು ಮಕ್ಕಳನ್ನು ಕರೆದುಕೊಂಡು ಬಾಗಲಕೋಟೆಯ ಆಲಮಟ್ಟಿ ಕಡೆಗೆ ಹೊರಟಿದ್ದ ಸಂದರ್ಭ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕ್ಲೀನರ್ ದಾವಲಸಾಬ ಸಾಲವಾಡಗಿ (40) ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು, ಶಿಕ್ಷಣ ಇಲಾಖೆ ಅನುಮತಿ ಇಲ್ಲದೆ ಚೋಕಾರಿ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳನ್ನು ಪಿಕ್‌ನಿಕ್‌ಗೆ ಕರೆದುಕೊಂಡು ಹೊರಟಿದ್ದರು ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.