ಕೇಂದ್ರದಿಂದ ಮತ್ತೆ ಬೆಲೆ ಏರಿಕೆ: ಸಾರ್ವಜನಿಕರಿಗೆ ‘ಕರೆಂಟ್‌ ಶಾಕ್‌’ ಕೊಟ್ಟ ಕೇಂದ್ರ..!

ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನರಿಗೆ ಕೇಂದ್ರ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಇನ್ನು ಮುಂದೆ ಪ್ರತಿ ತಿಂಗಳು ಕರೆಂಟ್ ಬಿಲ್ ದರಗಳು ಹೆಚ್ಚಾಗಲಿವೆ. ಹೌದು, ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ತೈಲ ಬೆಲೆಗಳ ಏರಿಳಿತಗಳ ಅನುಗುಣವಾಗಿ ಪೆಟ್ರೋಲ್,…

electricity-bill-vijayaprabha-news

ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನರಿಗೆ ಕೇಂದ್ರ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಇನ್ನು ಮುಂದೆ ಪ್ರತಿ ತಿಂಗಳು ಕರೆಂಟ್ ಬಿಲ್ ದರಗಳು ಹೆಚ್ಚಾಗಲಿವೆ.

ಹೌದು, ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ತೈಲ ಬೆಲೆಗಳ ಏರಿಳಿತಗಳ ಅನುಗುಣವಾಗಿ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಬೆಲೆಗಳನ್ನು ಹೆಚ್ಚಿಸಲಾಗಿದೆ. ಆದರೆ ಇನ್ಮುಂದೆ ಪ್ರತಿ ತಿಂಗಳು ವಿದ್ಯುತ್ ಶುಲ್ಕವನ್ನು ಹೆಚ್ಚಿಸಲಾಗುವುದು ಜೊತೆಗೆ ಹೊಸ ನಿಯಮಗಳನ್ನ ತರಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡೆಸಿದೆ.

ವಿದ್ಯುತ್ ಖರೀದಿ ಬೆಲೆ, ಕಲ್ಲಿದ್ದಲು ಹಾಗೂ ಇಂಧನ ದರದಲ್ಲಿ ವ್ಯತ್ಯಾಸದ ಕಾರಣ ಕಾಲಕಾಲಕ್ಕೆ ವಿದ್ಯುತ್ ದರವನ್ನು ಸರಿಯಾಗಿ ಹೊಂದಿಸಲು ಕೇಂದ್ರ ಸರ್ಕಾರ ಹೊಸ ನಿಯಮಾವಳಿಗಳನ್ನು ಮಾಡುತ್ತಿದ್ದು, ಸೆಪ್ಟೆಂಬರ್ 11 ರೊಳಗೆ ಈ ನಿಯಮಗಳ ಬಗ್ಗೆ ಏನಾದರೂ ಆಕ್ಷೇಪಣೆಗಳು ಹಾಗೂ ಸಲಹೆಗಳಿದ್ದರೆ ಕಳುಹಿಸುವಂತೆ ಎಲ್ಲಾ ರಾಜ್ಯಗಳಿಗೆ ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.