ಬೆಂಗಳೂರು: ರಾಜ್ಯದಲ್ಲಿ ಮಳೆ ಹಾನಿ ಪರಿಹಾರಕ್ಕಾಗಿ ಒಟ್ಟು ₹3,600 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸದನದಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.
ಹೌದು, ಈ ಕುರಿತು ಸದನದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಮಳೆಯಿಂದ ರಾಜ್ಯದಲ್ಲಿ 10.6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಈ ರೈತರಿಗೆ ಪರಿಹಾರ ಒದಗಿಸಲು ₹1,550 ಕೋಟಿ ಅನುದಾನದ ಅಗತ್ಯವಿದೆ ಎಂದು ಹೇಳಿದ್ದಾರೆ.
ಇನ್ನು, ಹಾನಿಗೊಳಗಾಗಿರುವ 42,040 ಮನೆಗಳಿಗೆ ಪರಿಹಾರವಾಗಿ ₹850 ಕೋಟಿ ಹಾಗೂ ರಸ್ತೆ, ಸೇತುವೆಯಂತಹ ಮೂಲಸೌಕರ್ಯ ದುರಸ್ತಿಗಾಗಿ ₹1,200 ಕೋಟಿ ಪರಿಹಾರವನ್ನು ತುರ್ತಾಗಿ ನೀಡಲಾಗುವುದು ಸಿಎಂ ಬೊಮ್ಮಾಯಿ ಹೇಳಿದ್ದಾರೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.