ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವಾರು ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿ ಜನರು ಪರದಾಡುತ್ತಿದ್ದಾರೆ. ಮಳೆಯಿಂದ ಹಾನಿಗೆ ಒಳಗಾಗಿರುವ ಮೂಲಸೌಕರ್ಯ ಸರಿಪಡಿಸಲು ಪ್ರವಾಹ ಪೀಡಿತ ಜಿಲ್ಲೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ 600 ಕೋ.ರೂ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಬೆಂಗಳೂರಿನ ಮೂಲಸೌಕರ್ಯಕ್ಕಾಗಿ 300 ಕೋಟಿ ರೂ. ಬಿಡುಗಡೆ ಮಾಡಲಾಗುತ್ತದೆ ಎಂದ ಅವರು, ನಮ್ಮ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮಳೆ ಸಮಸ್ಯೆ ಎದುರಿಸಲು ಸಿದ್ಧರಿದ್ದೇವೆ. ಮಳೆ ನಿಂತ ನಂತರ ಮೂಲಸೌಕರ್ಯಗಳ ಕಾಮಗಾರಿ ಆರಂಭಿಸುತ್ತೇವೆ. ಈ ಸವಾಲನ್ನು ಎಲ್ಲರೂ ಒಟ್ಟಾಗಿ ಎದುರಿಸೋಣ ಎಂದಿದ್ದಾರೆ.