ಬೆಂಗಳೂರು: ಈಗಾಗಲೇ ಮಾರ್ಚ್ 4ರಂದು ರಾಜ್ಯ ಬಜೆಟ್ಗೆ ದಿನ ನಿಗದಿಯಾಗಿದ್ದು, ಇದೇ ವೇಳೆ ಹಣ ಕೊಟ್ಟು BMTCಯಲ್ಲಿ ಸಂಚರಿಸುತ್ತಿರುವ ಮಹಿಳಾ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಗುವ ಲಕ್ಷಣಗಳಿವೆ.
ಹೌದು, BMTC ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪಾಸ್ ಕೊಡಬೇಕು ಎಂಬ ಕೂಗು ಹೆಚ್ಚಾಗುತ್ತಿದ್ದು, BMTC ಉಪಾಧ್ಯಕ್ಷ ಮತ್ತು ಅಧಿಕಾರಿಗಳ ತಂಡ ಈ ವಿಚಾರವನ್ನು ಸಿಎಂ ಗಮನಕ್ಕೂ ತಂದಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ.
ಹಾಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಮೊದಲ ಬಜೆಟ್ ನಲ್ಲಿ ಮಹಿಳೆಯರಿಗೆ ಸಿಹಿ ಸುದ್ದಿ ಕೊಡೋ ಸಾಧ್ಯತೆ ಇದೆ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.