ರಾಜ್ಯದ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಭರ್ಜರಿ ಗುಡ್‌ನ್ಯೂಸ್ ಘೋಷಿಸಿದ್ದಾರೆ.
ಹೌದು, ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಇದೇ ತಿಂಗಳು ಆರಂಭಿಸಿ, ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ರೂ.ವರೆಗೆ ಸಹಾಯಧನ ಎಂದಿದ್ದಾರೆ. ಮನೆ ನಡೆಸಲು ಹೆಣ್ಣುಮಕ್ಕಳಿಗೆ ವಿಶೇಷ ಕಾರ್ಯಕ್ರಮ ಘೋಷಿಸಲಾಗುತ್ತದೆ. ಪ್ರತಿ ಕುಟುಂಬದ ಅಗತ್ಯವನ್ನು ನೋಡಿಕೊಂಡು 1000, 1500, 2000 ರೂ.ಗಳ ಆರ್ಥಿಕ ನೆರವು ನೀಡಲಾಗುತ್ತದೆ ಎಂದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.