ರಾಜ್ಯದ ಯುವಕರು ಒಗ್ಗೂಡಿಸಿ, ಸ್ವ ಉದ್ಯೋಗ ರೂಪಿಸಿಕೊಳ್ಳಲು ನೆರವು ನೀಡಲು ಸ್ವಾಮಿ ವಿವೇಕಾನಂದ ಯುವ ಶಕ್ತಿ ಸಂಘ ಯೋಜನೆಗೆ (Swami Vivekananda Yuva Shakti Yojana) ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಇದನ್ನು ಓದಿ: ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಆಧಾರ್-ವೋಟರ್ ಐಡಿ ಲಿಂಕ್ ಗಡುವು ವಿಸ್ತರಣೆ
ಹೌದು, ರಾಜ್ಯದಲ್ಲಿ ಯುವಕರಿಗೆ ಮೊದಲ ಬಾರಿಗೆ ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಈ ಯೋಜನೆ ಜಾರಿಗೆ ತಂದಿದ್ದು, ರಾಜ್ಯದಲ್ಲಿ ಒಟ್ಟು 5,951 ಗ್ರಾಮ ಪಂಚಾಯಿತಿಗಳಿದ್ದು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ತಲಾ 2 ಗುಂಪುಗಳನ್ನು ರಚಿಸಿ, ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವುದಕ್ಕೆ ನೆರವು ನೀಡಲು ರಾಜ್ಯ ಸರ್ಕಾರ ಈ ಮೂಲಕ ಮುಂದಾಗಿದೆ.
ಇದನ್ನು ಓದಿ: ಸ್ವಸಹಾಯ ಗುಂಪುಗಳಿಗೆ 10,000 ರೂ ಮತ್ತು 5 ಲಕ್ಷ ರೂ ಸಾಲ ಸೌಲಭ್ಯ; ಏನಿದು ಯುವಶಕ್ತಿ ಯೋಜನೆ, ಈ ಗುಂಪಿಗೆ ಸಿಗುವ ಸೌಲಭ್ಯಗಳೇನು?
ಈವರೆಗೆ 6,509 ಗುಂಪುಗಳನ್ನು ರಚಿಸಲಾಗಿದ್ದು, 1,754 ಗುಂಪುಗಳಿಗೆ ಒಟ್ಟು ₹1.75 ಕೋಟಿ ಸುತ್ತುನಿಧಿ ಪಾವತಿಸಲಾಗಿದ್ದು, ತಲಾ 10 ಸಾವಿರ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ. ಸ್ವಾಮಿ ವಿವೇಕಾನಂದ ಯುವ ಶಕ್ತಿ ಸಂಘ ಯೋಜನೆಯನ್ನು (Swami Vivekananda Yuva Shakti Yojana) ಅನುಷ್ಠಾನಕ್ಕೆ 500 ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಕಳೆದ ವರ್ಷದ ಬಜೆಟ್‌ನಲ್ಲಿ ಘೋಷಿಸಿದ್ದು, ಈ ಪೈಕಿ ಮೊದಲ ಕಂತಿನಲ್ಲಿ 10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ.
ಇದನ್ನು ಓದಿ: ವಿಚ್ಛೆದಿತ ಖ್ಯಾತ ನಟನೊಂದಿಗೆ ಪತಿ ಕಳೆದುಕೊಂಡ ಖ್ಯಾತ ನಟಿಯ ಮದುವೆ: ಧನುಷ್,ಮೀನಾ ಮದುವೆ ಬಗ್ಗೆ ಸ್ಪೋಟಕ ಮಾಹಿತಿ..!
ಇನ್ನು, ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯಡಿ (Swami Vivekananda Yuva Shakti Yojana) , ಪ್ರತಿ ಗುಂಪಿಗೆ 10 ಸಾವಿರ ರೂ ನಿಧಿ, 1 ಲಕ್ಷ ರೂ ಸಬ್ಸಿಡಿಯೊಂದಿಗೆ 5 ಲಕ್ಷ ರೂ. ಸಾಲ ಸೌಲಭ್ಯ ((loan facility) ಒದಗಿಸಲಾಗುತ್ತದೆ. ಸ್ವಾಮಿ ವಿವೇಕಾನಂದ ಸ್ವ ಸಹಾಯ ಸಂಘ ರಚಿಸುವಂಥವರು 18ರಿಂದ 29 ವರ್ಷ ವಯಸ್ಸಿನೊಳಗಿನ ಯುವಕರಾಗಿದ್ದು, ಒಂದು ಸ್ವಸಹಾಯ ಗುಂಪು ರಚಿಸುವುದಕ್ಕೆ ಕನಿಷ್ಠ 10 ಸದಸ್ಯರು ಇರಬೇಕಾಗಿದ್ದು, ಗರಿಷ್ಠ 20 ಸದಸ್ಯರ ಸೇರ್ಪಡೆಗೆ ಅವಕಾಶ ಇದೆ
ಇದನ್ನು ಓದಿ: ವೀಕೆಂಡ್ ವಿತ್ ರಮೇಶ್ಗೆ ಇವರೇ ಮೊದಲ ಅತಿಥಿ, ರಾಜಕಾರಣಿಗಳಿಗಿಲ್ಲ ಪ್ರವೇಶ; ಇಲ್ಲಿದೆ ಸಾಧಕರ ಲಿಸ್ಟ್