ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ಸರ್ಕಾರದಿಂದ ಸ್ತ್ರೀ ಶಕ್ತಿಗೆ 10 ಲಕ್ಷ ರೂ, ಯುವ ಶಕ್ತಿ ಸಂಘಕ್ಕೆ 1 ಲಕ್ಷ ರೂ ನರೆವು

‘ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ’ ಪ್ರಯುಕ್ತ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು,…

Basavaraj Bommai

‘ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ’ ಪ್ರಯುಕ್ತ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು.

ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಬೀದರ್​ನಿಂದ ಬಳ್ಳಾರಿವರೆಗೆ ಎಕ್ಸ್​ಪ್ರೆಸ್ ವೇ ನಿರ್ಮಾಣ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಸಂಬಂಧ ಹಲವು ಭರವಸೆಗಳನ್ನು ನೀಡಿದರು.

ಅಷ್ಟೇ ಅಲ್ಲ, ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ವರ್ಷವನ್ನು ವರ್ಷಪೂರ್ತಿ ಆಚರಿಸುವುದಾಗಿ ಘೋಷಣೆ ಮಾಡಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ, ತೊಗರಿ ಮಂಡಳಿಯ ‘ಭೀಮಾ ಪಲ್ಸ್’ ಬ್ರ್ಯಾಂಡ್ ಅಡಿಯಲ್ಲಿ ತೊಗರಿ ಮಾರಾಟಕ್ಕೆ ಚಾಲನೆ ನೀಡಿದರು.

Vijayaprabha Mobile App free

ರ್ಕಾರದಿಂದ ಸ್ತ್ರೀ ಶಕ್ತಿ ಸಂಘಕ್ಕೆ 10 ಲಕ್ಷ ರೂ., ಯುವ ಶಕ್ತಿ ಸಂಘಕ್ಕೆ 1 ಲಕ್ಷ ರೂ.

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದಲ್ಲಿ 2 ಹೊಸ ಯೋಜನೆಗಳನ್ನು ಸಿಎಂ ಬೊಮ್ಮಾಯಿ ಘೋಷಿಸಿದ್ದು, ಕ.ಕರ್ನಾಟಕ ಭಾಗದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆ ಅನುಷ್ಠಾನ ಮಾಡಲಾಗುವುದು. ಪ್ರತಿ ಗ್ರಾಮದ ಒಂದೊಂದು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 10 ಲಕ್ಷ ರೂ. ನೆರವು ನೀಡಲಾಗುವುದು.

ಯುವ ಶಕ್ತಿ ಯೋಜನೆಯಡಿ ಗ್ರಾಮದಲ್ಲಿ 2 ಯುವ ಶಕ್ತಿ ಸಂಘಗಳಿಗೆ 1 ಲಕ್ಷ ರೂ. ನರೆವು ನೀಡಲಾಗುವುದು. ಜೊತೆಗೆ ಇವರು ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ಒದಗಿಸಲಾಗುವುದು ಎಂದು ಹೇಳಿದರು.

ಈ ಜಿಲ್ಲೆಗಳಿಗೆ ಸಿಎಂ ಗಿಫ್ಟ್..!

ಕಲಬುರಗಿ ಮತ್ತು ವಿಜಯಪುರದಲ್ಲಿ ಜವಳಿ ಪಾರ್ಕ್ ಆರಂಭಿಸುವ ಬಗ್ಗೆ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದ್ದೇವೆ ಎರಡೂ ಕಡೆ ಜವಳಿ ಪಾರ್ಕ್ ಆರಂಭಕ್ಕೆ ಮಂಜೂರಾತಿ ನೀಡಲಿದ್ದು, ಶೀಘ್ರ ಕಲಬುರಗಿಗೆ ಮತ್ತೆ ಬಂದು ಅಡಿಗಲ್ಲು ಹಾಕಲಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಕಲ್ಯಾಣ ಕರ್ನಾಟಕದ ಭಾಗದಲ್ಲಿ 2100 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. 68 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಂಜೂರಾತಿ ನೀಡಲಾಗಿದೆ ಎಂದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.