ಸಿಎಂ ಆಗಿ ಒಂದು ವರ್ಷ ಪೂರೈಸಿದ ಹಿನ್ನಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ‘ಯುವಕರಿಗಾಗಿ ವಿಶೇಷ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.
ಹೌದು, ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ಜಾರಿಗೆ ತರುತ್ತಿದ್ದೇವೆ’ ಎಂದು ಪ್ರಕಟಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ‘ಪ್ರತಿ ಗ್ರಾಮಕ್ಕೆ ಒಂದು ವಿವೇಕಾನಂದ ಸಂಘ ಸ್ಥಾಪಿಸಿ, ಸ್ತ್ರೀ ಶಕ್ತಿ ಸಂಘಕ್ಕೆ ನೀಡುವ ಸೌಲಭ್ಯವನ್ನು ನೀಡಲಾಗುವುದು. ಇದರಿಂದ 5 ಲಕ್ಷ ಯುವಕರಿಗೆ ನೆರವಾಗಲಿದೆ’ ಎಂದು ಹೇಳಿದ್ದಾರೆ.
ಸಮಗ್ರ ಕಲ್ಯಾಣ ನಮ್ಮ ಗುರಿ- ಸಿಎಂ
ಇನ್ನು, ದುಡಿಯುವ, ಬಡವರ, ಶ್ರಮಿಕರ ವರ್ಗಕ್ಕೆ ನಮ್ಮ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಅವರ ಸಮಗ್ರ ಕಲ್ಯಾಣವೇ ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
‘ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಟ್ಟಕ್ಕೆ ಉನ್ನತೀಕರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, 8000 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಕೊಠಡಿಗಳಿಗೆ ‘ವಿವೇಕ’ ಅಂತ ಹೆಸರಿಡಲಾಗುವುದು ಎಂದು ತಿಳಿಸಿದ್ದಾರೆ.