ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದಲ್ಲಿ ಕಾನೂನು ಪದಕೋಶ, ಕೇಂದ್ರದ 15 ನಿಯಮಗಳ ಕನ್ನಡ ಅವತರಣಿಕೆಯನ್ನು ಲೋಕಾರ್ಪಣೆ ಮಾಡಿದ್ದಾರೆ.
ಹೌದು, ಕಾನೂನು ಪದಕೋಶ, ಕೇಂದ್ರದ 15 ನಿಯಮಗಳ ಕನ್ನಡ ಅವತರಣಿಕೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ‘ಕಾನೂನು ಪದಕೋಶ ಲೋಕಾರ್ಪಣೆ ಮಾಡಿದ್ದು ಸಂತಸದ ಸಂಗತಿ. ಕಾನೂನು ನಿಘಂಟನ್ನು 2003ರಲ್ಲಿ ಕನ್ನಡಕ್ಕೆ ತರ್ಜುಮೆ ಮಾಡಲಾಗಿತ್ತು. ಅದು ಇಂದಿಗೂ ನ್ಯಾಯಾಲಯಗಳಲ್ಲಿ ಬಳಕೆಯಾಗುತ್ತಿದೆ. ಕಾನೂನು ಪದಕೋಶ, 15 ನಿಯಮಗಳ ಲೋಕಾರ್ಪಣೆಯಿಂದ ಮತ್ತಷ್ಟು ಅನುಕೂಲವಾಗಲಿದೆ’ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



