ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಯಲ್ಲಿ ನಡೆದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಅನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ಹಸ್ತಾಂತರಿಸಿ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.
ಹೌದು, ಈ ಹತ್ಯೆ ಪ್ರಕರಣದಲ್ಲಿ ಅಂತಾರಾಜ್ಯದ ದುಷ್ಕರ್ಮಿಗಳ ಕೈವಾಡ ಶಂಕೆ ಹಿನ್ನೆಲೆ ಸಿಎಂ ಸಿಎಂ ಬಸವರಾಜ ಬೊಮ್ಮಾಯಿ ಈ ಸೂಚನೆ ನೀಡಿದ್ದು, ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.
ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಯಲ್ಲಿ ರಾತ್ರಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಇನ್ನು, ಈ ಘಟನೆ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.