ನೆರೆ ರಾಜ್ಯದ ವಿರುದ್ಧ ಕಿಡಿಕಾರಿದ ಸಿಎಂ: ತಮಿಳುನಾಡು ನಿರ್ಣಯಕ್ಕೆ ಯಾವುದೇ ಕಾನೂನಿನ ಬೆಲೆ ಇಲ್ಲ ಎಂದ ಬೊಮ್ಮಾಯಿ

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ತೆಗೆದುಕೊಂಡ ನೆರೆ ರಾಜ್ಯ ತಮಿಳುನಾಡು ವಿಧಾನಸಭೆ ನಿರ್ಣಯಕ್ಕೆ ಯಾವುದೇ ಕಾನೂನಿನ ಬೆಲೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಖಂಡಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತಾಡಿದ…

basavaraj-bommai-vijayaprabha

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ತೆಗೆದುಕೊಂಡ ನೆರೆ ರಾಜ್ಯ ತಮಿಳುನಾಡು ವಿಧಾನಸಭೆ ನಿರ್ಣಯಕ್ಕೆ ಯಾವುದೇ ಕಾನೂನಿನ ಬೆಲೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಖಂಡಿಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಮೇಕೆದಾಟು ಯೋಜನೆ ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳವಾಗಿದ್ದು, ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಕಾವೇರಿ ಜಲ ವಿವಾದ ನ್ಯಾಯಮಂಡಲಿ ತೀರ್ಪು ನೀಡಿ ನೀರಿನ ಹಂಚಿಕೆಯಾಗಿದ್ದು, ನೀರನ್ನು ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇದೆ.

ಇನ್ನು, ನಮ್ಮ ರಾಜ್ಯದಲ್ಲಿ ಹುಟ್ಟಿರುವ ಕಾವೇರಿ, ಇಲ್ಲಿ ಬಿದ್ದ ಮಳೆಯ ಆಧಾರದ ಮೇಲೆ ನಾವು ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯನ್ನು ರೂಪಿಸಿದ್ದೇವೆ ಎಂದು ಹೇಳಿದ ಸಿಎಂ, ಇಷ್ಟೆಲ್ಲಾ ಇದ್ದರೂ ತಮಿಳುನಾಡಿನವರು ತಕರಾರು ಮಾಡುತ್ತಿದ್ದು, ವಿವಿಧ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Vijayaprabha Mobile App free

ರಾಷ್ಟ್ರೀಯ ಹಸಿರು ನ್ಯಾಯಮಂಡಲಿ ನಮ್ಮ ಪರವಾಗಿ ಆದೇಶ ನೀಡಿದ್ದು, ತಮಿಳುನಾಡು ಅದರ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದು, ಸರ್ವ ಪಕ್ಷ ಸಭೆ ನಡೆಸಿ ಒಗ್ಗಟ್ಟಿನಿಂದ ಇದನ್ನು ಎದುರಿಸಲು ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಣಯ ಮಾಡಿದ್ದು, ಇದಕ್ಕೆ ಯಾವುದೇ ಬೆಲೆ ಇಲ್ಲ ಹಾಗೂ ಕಾನೂನಿನ ಪ್ರಕಾರವೂ ಇಲ್ಲ. ರಾಜಕೀಯ ತಂತ್ರವಷ್ಟೇ ಎಂದು ಹೇಳಿದರು.

ಈ ರೀತಿಯ ಹತ್ತು ಹಲವಾರು ನಿರ್ಣಯಗಳಾಗಿದ್ದು, ಅದಕ್ಕೆ ಬೆಲೆ ಇಲ್ಲ. ಸರ್ವ ಪಕ್ಷ ಸಭೆಯಲ್ಲಿ ನಿರ್ಣಯಿಸಿದಂತೆ ಡಿಪಿಆರ್ ಪಡೆದು ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆದು ಯೋಜನೆ ಅನುಷ್ಠಾನಕ್ಕೆ ಎಲ್ಲ ಕ್ರಮವನ್ನು ಸರ್ಕಾರ ತೆಗೆದುಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.