ಸೈನಿಕರ ಕುಟುಂಬಕ್ಕೆ 25 ಲಕ್ಷ, ಕುಶಲಕರ್ಮಿಗೆ 50,000 ಸಾಲ; ಇಲ್ಲಿದೆ ಸಿಎಂ ಬೊಮ್ಮಾಯಿ ಘೋಷಣೆಗಳ ಸಂಪೂರ್ಣ ವಿವರ

75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್‌ ಘೋಷಣೆಗಳನ್ನು ಮಾಡಿದ್ದು, ಯುದ್ಧದಲ್ಲಿ ಮಡಿದ ಸೈನಿಕರ ಕುಟುಂಬಕ್ಕೆ 25 ಲಕ್ಷ, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ 50,000 ವರೆಗೆ ಸಾಲ ಯೋಜನೆ…

CM Basavaraj Bommai

75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್‌ ಘೋಷಣೆಗಳನ್ನು ಮಾಡಿದ್ದು, ಯುದ್ಧದಲ್ಲಿ ಮಡಿದ ಸೈನಿಕರ ಕುಟುಂಬಕ್ಕೆ 25 ಲಕ್ಷ, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ 50,000 ವರೆಗೆ ಸಾಲ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಯೋಧರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಹಾಗೂ ಕುಟುಂಬಸ್ಥರಿಗೆ 25 ಲಕ್ಷ ರೂ ಪರಿಹಾರ:

ಹೌದು, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಯುದ್ಧದಲ್ಲಿ ಮಡಿದ ಸೈನಿಕರ ಮಕ್ಕಳಿಗೆ ನೌಕರಿ ಕೊಡುವುದಾಗಿ ಘೋಷಿಸಿದ್ದು, ಇದಲ್ಲದೆ 25 ಲಕ್ಷ ರೂಪಾಯಿಗಳ ನೆರವು ಮಡಿದ ಸೈನಿಕರ ಕುಟುಂಬಕ್ಕೆ ಸಿಗಲಿದ್ದು, ಇದು ಸೈನಿಕರ ಕುಟುಂಬಕ್ಕೆ ಭದ್ರತೆ ಒದಗಿಸಲು ನೆರವು ನೀಡಲಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

Vijayaprabha Mobile App free

ಭೂ ರಹಿತ ಕೃಷಿಕರ ಮಕ್ಕಳಿಗೆ ವಿದ್ಯಾನಿಧಿ:

ಭೂ ರಹಿತ ಕೃಷಿ ಕೂಲಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದು, ಇದಕ್ಕಾಗಿ 430 ಕೋಟಿ ರೂಪಾಯಿ ಮೀಸಲಿಡುವುದಾಗಿ ಸಿಎಂ ಹೇಳಿದ್ದಾರೆ. 4050 ಹೊಸ ಅಂಗನವಾಡಿ ತೆರೆಯಲು ಸರ್ಕಾರ ನಿರ್ಧರಿಸಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಹಾಸ್ಟೆಲ್‌ಗಳು, 16 ಲಕ್ಷ ಕುಟುಂಬದ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ.

50,000 ವರೆಗೆ ಸಾಲ ಯೋಜನೆ:

ಸಿಎಂ ಬಸವರಾಜ ಬೊಮ್ಮಾಯಿ, ‘ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲಕರ್ಮಿಗಳಿಗೆ ತಲಾ ₹50 ಸಾವಿರ ವರೆಗೆ ಸಾಲ-ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗುವುದು’ ಎಂದು ತಿಳಿಸಿದ್ದಾರೆ.

250 ಕೋಟಿ ರೂ ವೆಚ್ಚದಲ್ಲಿ ಶೌಚಾಲಯ:

ಇನ್ನು, 250 ಕೋಟಿ ರೂ ವೆಚ್ಚದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣವಾಗಲಿದೆ ಎಂದು ಭರವಸೆ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.