ಬೆಂಗಳೂರು: ಅನಾವಶ್ಯಕವಾಗಿ ರಾಜ್ಯ ಬಂದ್ ಮಾಡಿದರೆ ನಾನು ಸಹಿಸುವುದಿಲ್ಲ. ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕನ್ನಡಪರ ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮರಾಠ ಅಭಿವೃದ್ಧಿ ನಿಗಮ ರಚಿಸಲು ಮುಂದಾಗಿರುವ ಸರ್ಕಾರದ ನಿರ್ಧಾರ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿ.5ರಂದು ರಾಜ್ಯ ಬಂದ್ ಗೆ ಕರೆ ನೀಡಿವೆ.
ಇದಕ್ಕೆ ಬೆಂಗಳೂರಿನಲ್ಲಿ ತೀಕ್ಷಣ ಪ್ರತಿಕ್ರಿಯೆ ನೀಡಿರುವು ಬಿ.ಎಸ್.ಯಡಿಯೂರಪ್ಪ, ನಾನು ಕನ್ನಡ ನಾಡು, ನುಡಿ ಪರವಾಗಿದ್ದೇನೆ. ಬೇರೆ ಕಾರಣ ಇಟ್ಟುಕೊಂಡು ರಾಜ್ಯದಲ್ಲಿ ಬಂದ್ ನಡೆಸುವುದು, ಪ್ರತಿಕೃತಿ ಸುಡುವುದು ಮಾಡಿದರೆ ನಾನು ಸಹಿಸುವುದಿಲ್ಲ. ಶಾಂತಿಯುತ ಪ್ರತಿಭಟನೆ ಬೇಕಾದರೆ ಮಾಡಲಿ ಎಂದು ಕನ್ನಡಪರ ಸಂಘಟನೆಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕನ್ನಡಪರ ಸಂಘಟನೆಗಳ ಕೆಂಗಣ್ಣು !
ರಾಜ್ಯ ಸರ್ಕಾರ ನಾಡಿನ ನೆಲ, ಜಲ ಭಾಷೆ ರಕ್ಷಣೆಗೆ ಮುಂದಾಗುವ ಬದಲು ಓಟಿಗಾಗಿ ಮತಬ್ಯಾಂಕ್ ರಾಜಕಾರಣಕ್ಕೆ ಮುಂದಾಗಿದೆ. ಮರಾಠ ಅಭಿವೃದ್ಧಿ ಪ್ರಾಥೀಕಾರ ರಚನೆ ಮಾಡಿ ನಾಡಿನ ಜನರಿಗೆ ದ್ರೋಹ ಬಗಿಯಲು ಮುಂದಾಗಿದೆ. ಸರ್ಕಾರ ತನ್ನ ನಿರ್ಧಾರ ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಬಂದ್ ಗೆ ಕರೆ ನೀಡಲಾಗಿದೆ.
ಪೊಲೀಸ್ ವ್ಯವಸ್ಥೆ ಉಪಯೋಗಿಸಿಕೊಂಡು ಹೆದರಿಸುವ ಪ್ರಯತ್ನ ಮಾಡಿದರೆ ತಕ್ಕ ಪಾಠ ಕಲಿಯಬೇಕಾಗುತ್ತೆ ಎಂದು ಸಾರಾ ಗೋವಿಂದ್ ಹಾಗೂ ವಾಟಾಳ್ ನಾಗರಾಜ್ ಈ ಹಿಂದೆ ಎಚ್ಚರಿಕೆ ನೀಡಿದ್ದರು.