ಬೆಂಗಳೂರು: ಮರಾಠಿ ಅಭಿವೃದ್ಧಿ ಪ್ರಾಧೀಕಾರ ರಚನೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ರಾಜ್ಯ ಬಂದ್ ಮಾಡುವ ಕುರಿತು ಎಚ್ಚರಿಕೆ ನೀಡಿವೆ. ಆದರೆ ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀಕ್ಷಣ ಪ್ರತಿಕ್ರಿಯೆ ನೀಡಿದ್ದಾರೆ.
ಇಲ್ಲಿನ ಮರಾಠಿಗರು ಕನ್ನಡಿಗರೇ, ಅದಕ್ಕಾಗಿ ಅಭಿವೃದ್ಧಿ ಪ್ರಾಧೀಕಾರ ರಚನೆ ಮಾಡಲಾಗಿದೆ. ರಾಜ್ಯದಲ್ಲಿ ಯಾವುದೇ ಬಂದ್ ನಡೆಸಬಾರದು ಎಂದು ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡುತ್ತೇನೆ. ಒಂದು ವೇಳೆ ಬಂದ್ ಮಾಡಿದರೆ ಕಠಿಣ ಪ್ರಮ ಕೈಗೊಳ್ಳಲಾಗುವುದು ಎಂದು ಬುಧವಾರ ಬೆಂಗಳೂರಿನಲ್ಲಿ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸೂಚನೆಯಂತೆ ಅಭಿವೃದ್ಧಿ ಪ್ರಾಧೀಕಾರ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ ಮರಾಠ ಅಭಿವೃದ್ಧಿ ಪ್ರಾಧೀಕಾರ ರಚನೆ ಮಾಡಲಾಗಿದೆ. ಇದಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.