ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಸಿಎಂ ಬದಲಾವಣೆ ಕುರಿತು, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರು, ರಾಜ್ಯದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಇಲ್ಲ, 100% ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೀತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು, ಸಿಎಂ ಬದಲಾವಣೆ ಮಾಡೋಕೆ ಹೋದವರು 3 ನಾಮ ಹಾಕ್ಕೊಂಡು ಬಂದಿದ್ದಾರೆ ಎಂದು ಹೇಳಿದ್ದು, ಹೈಕಮಾಂಡ್ ಹೇಳಿದಂತೆ ಬಿಜೆಪಿಯವರು ಕೇಳ್ತಾರೆ ಎಂದು ಪರೋಕ್ಷವಾಗಿ ಸಚಿವ ಸಿ.ಪಿ. ಯೋಗೇಶ್ವರ್‌ಗೆ ಶಾಸಕ ಶಾಮಾನೂರು ಶಿವಶಂಕರಪ್ಪ ಲೇವಡಿ ಮಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.