ಬೆಂಗಳೂರು: ಸದನದಲ್ಲಿ ಮೈಸೂರು ಗ್ಯಾಂಗ್ ರೇಪ್ ಚರ್ಚೆ ಜೋರಾಗಿಯೇ ನಡೆಡಿದ್ದು, ಈ ವೇಳೆ ದೊಡ್ಡ ಧ್ವನಿಯಲ್ಲಿ ಮಹತ್ವದ ಘೋಷಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ಆಗುವಂತೆ ಮಾಡಿಯೇ ಮಾಡುತ್ತೇವೆ’ ಎಂದು ಹೇಳಿದರು.
ಇನ್ನು, ಸಂತ್ರಸ್ತೆ ಹಾಗೂ ಆಕೆಯ ತಂದೆ ಇಬ್ಬರು ಇಂದು ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ, ವಿಚಾರಣೆಗೆ ಯಾವುದೇ ತೊಂದರೆ ಆಗುವುದಿಲ್ಲ. ಅವರು ಹೇಳಿದ ಪ್ರಾಸಿಕ್ಯೂಟರ್ ರನ್ನೇ ನೇಮಿಸುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇನ್ನು, ಸಿಎಂ ಅವರ ಈ ಮಾತಿಗೆ ಸದನದಲ್ಲಿದ್ದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.