ಬೆಂಗಳೂರು: ಪ್ರಾಥಮಿಕ ಶಾಲೆ ‘1ರಿಂದ 5ನೇ ತರಗತಿ ಆರಂಭಿಸುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ’ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು , ‘ ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ಇನ್ನು ಯಾವುದೇ ರೀತಿಯ ಚರ್ಚೆ ನಡೆದಿಲ್ಲ. ತಜ್ಞರು ಕೂಡ ಶಾಲೆ ಆರಂಭಿಸುವ ಕುರಿತಾಗಿ ಯಾವುದೇ ಸಲಹೆ ನೀಡಿಲ್ಲ’ ಎಂದು ತಿಳಿಸಿದ್ದಾರೆ.
ಇನ್ನು, ಈ ವಿಚಾರವಾಗಿ ‘ರಾಜ್ಯದಲ್ಲಿ ದಸರಾ ನಂತರ ಹಂತ ಹಂತವಾಗಿ ಪ್ರಾಥಮಿಕ ಶಾಲೆ ಆರಂಭಿಸಲಾಗುವುದು ಎಂದು, ಸಿಎಂ ಮತ್ತು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.