ಚೆನ್ನೈ: ತಮಿಳುನಾಡಿನಲ್ಲಿ ಚುನಾವಣಾ ಕಾವು ರಂಗೇರುತ್ತಿದ್ದು, ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನಕ್ಕೆ ಮಾಜಿ ಸಿಎಂ ದಿವಂಗತ ಎಂ.ಕರುಣಾನಿಧಿ ಮತ್ತು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಅವರೇ ಕಾರಣ ಎಂದು ತಮಿಳುನಾಡು ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಆರೋಪ ಮಾಡಿದ್ದಾರೆ.
ಹೌದು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿಗೆ ಡಿಎಂಕೆ ಕಾರಣ. ದೇವರು ಖಂಡಿತ ಅವರನ್ನು ಶಿಕ್ಷಿಸುತ್ತಾನೆ. ಅವರ ಮೇಲಿನ ಅಕ್ರಮ ಆಸ್ತಿಗಳಿಕೆ ಆರೋಪಗಳಿಂದ ಖುಲಾಸೆಗೊಂಡರೂ ಅದರ ವಿರುದ್ಧ ಡಿಎಂಕೆ ಮೇಲ್ಮನವಿ ಸಲ್ಲಿಸಿದ್ದು ಜಯಲಲಿತಾ ಅವರನ್ನು ಖಿನ್ನತೆಗೆ ದೂಡಿತ್ತು ಎಂದು ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಆರೋಪ ಮಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.