ಕಲ್ಯಾಣ ಕರ್ನಾಟಕಕ್ಕೆ ಗುಡ್ ನ್ಯೂಸ್; ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ

ಕಲಬುರಗಿ : ಕಲಬುರಗಿಯ ನೂತನವಾಗಿ ನಿರ್ಮಾಣವಾಗಿರುವ ಜಯದೇವ ಸರ್ಕಾರಿ ಹೃದ್ರೋಗ ಆಸ್ಪತ್ರೆಯನ್ನು (Jayadeva Heart Hospital) CM ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ. ಹೌದು, ಬೆಂಗಳೂರು, ಮೈಸೂರು ನಂತರ ಕಲ್ಯಾಣ ಕರ್ನಾಟಕದಲ್ಲಿ ಮೊದಲ ಜಯದೇವ ಹೃದ್ರೋಗ ಆಸ್ಪತ್ರೆ…

ಕಲಬುರಗಿ : ಕಲಬುರಗಿಯ ನೂತನವಾಗಿ ನಿರ್ಮಾಣವಾಗಿರುವ ಜಯದೇವ ಸರ್ಕಾರಿ ಹೃದ್ರೋಗ ಆಸ್ಪತ್ರೆಯನ್ನು (Jayadeva Heart Hospital) CM ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ.

ಹೌದು, ಬೆಂಗಳೂರು, ಮೈಸೂರು ನಂತರ ಕಲ್ಯಾಣ ಕರ್ನಾಟಕದಲ್ಲಿ ಮೊದಲ ಜಯದೇವ ಹೃದ್ರೋಗ ಆಸ್ಪತ್ರೆ ಇದಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 377 ಕೋಟಿ ರೂಪಾಯಿ ವೆಚ್ಚದಲ್ಲಿ ಜಯದೇವ ಸರ್ಕಾರಿ ಹೃದ್ರೋಗ ಆಸ್ಪತ್ರೆ ನಿರ್ಮಾಣಗೊಂಡಿದ್ದು, ಕಲಬುರಗಿಯಲ್ಲಿ ನೂತನ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣದಿಂದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ.

ಇದನ್ನೂ ಓದಿ : Non veg: ಸಾಹಿತ್ಯ ಸಮ್ಮೇಳನದಲ್ಲಿ ಕೊನೆಯ ದಿನ ಮಾಂಸದೂಟ ವಿತರಣೆ!

Vijayaprabha Mobile App free

ಕಲಬುರಗಿ ಜಯದೇವ ಆಸ್ಪತ್ರೆಯ ವಿಶೇಷತೆಗಳು

Jayadeva Heart Hospital in Kalaburagi

  • 371 ಹಾಸಿಗೆ ಸಾಮರ್ಥ್ಯದ ಕಟ್ಟಡ
  • 3 ಕ್ಯಾಥ್‌ಲ್ಯಾಬ್‌ಗಳು
  • 3 ಆಪರೇಷನ್ ಥಿಯೇಟರ್‌ಗಳು
  • 1 ಹೈಬ್ರಿಡ್ OT
  • 105 ICCU ಹಾಸಿಗೆಗಳು
  • 120 ಸಾಮಾನ್ಯ ವಾರ್ಡ್ ಬೆಡ್‌
  • ವಿಶೇಷ, ಅರೆ-ವಿಶೇಷ ಹಾಗು ಡೀಲಕ್ಸ್ ವಾರ್ಡ್ ಹಾಸಿಗೆಗಳು, 12 ರಿಕವರಿ, 12 ಪೋಸ್ಟ್ ಆಪರೇಟಿವ್ ಹಾಸಿಗೆಗಳು.
  • ಬಿಪಿಎಲ್​​ ಕಾರ್ಡ್​ದಾರರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಸಿಗಲಿದ್ದು, ಎಪಿಎಲ್​ ಕಾರ್ಡ್​ದಾರರಿಗೆ ಅಲ್ಪಮೊತ್ತದಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಇದನ್ನೂ ಓದಿ : ಮೂರು ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ; ಸಮ್ಮೇಳನದಲ್ಲಿ ತೆಗೆದುಕೊಂಡ ಆ 6 ನಿರ್ಣಯಗಳು ಯಾವುವು?

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.