Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » state news » cm siddaramaiah released the logo of karnataka games 2025
state news ಪ್ರಮುಖ ಸುದ್ದಿ

ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿದ ಸಿಎಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕ್ರೀಡಾಕೂಟದ ಲೋಗೋದಲ್ಲಿನ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ…

Author Avatar

Devaraj Naik

December 23, 20249:38 pm CMkarnatakalogosiddharamaiahsports

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕ್ರೀಡಾಕೂಟದ ಲೋಗೋದಲ್ಲಿನ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ ಬಣ್ಣವು ಕಡಲಿನ ಅಗಾಧತೆಯನ್ನು, ಜತೆಗೆ ಸೋಲು- ಗೆಲುವುಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವ ಈ ಲೋಗೋ ಅರ್ಥಪೂರ್ಣವಾಗಿದೆ.

ಕರ್ನಾಟಕ ಕ್ರೀಡಾಕೂಟ-2025 ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು, ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತವು ಕ್ರೀಡಾಕೂಟದ ವ್ಯವಸ್ಥಿತ ಆಯೋಜನೆ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು. ಕರ್ನಾಟಕ ಕ್ರೀಡಾಕೂಟ -2025 ಅನ್ನು ಜನವರಿ 17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ. 

Vijayaprabha Mobile App free

ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜನವರಿ 17ರಂದು ಮಂಗಳೂರಿನಲ್ಲಿ, ಸಮಾರೋಪ ಸಮಾರಂಭ ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ. ಸುಮಾರು 25 ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದು, ಕ್ರೀಡಾಕೂಟದ ಯಶಸ್ವಿ ಆಯೋಜನೆಗಾಗಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕ್ರೀಡಾಕೂಟದಲ್ಲಿ 3,750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4,500 ಜನರು ಭಾಗವಹಿಸಲಿದ್ದು, ಊಟ – ತಿಂಡಿ, ವಸತಿ, ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. 

ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು. ಸಭೆಯಲ್ಲಿ ಗೃಹಸಚಿವರಾದ ಡಾ|| ಪರಮೇಶ್ವರ್, ಇಂಧನ ಸಚಿವರಾದ ಕೆ ಜೆ ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಕೆ. ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಹಾಗೂ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗುವ ಪ್ರಜ್ವಲ್ ರೇವಣ್ಣ ಬೇಡಿಕೆ ನಿರಾಕರಿಸಿದ ಕೋರ್ಟ್

By Devaraj Naik January 15, 2025
#ट्रेंडिंग हैशटैग:CMkarnatakalogosiddharamaiahsports

Post navigation

Previous Previous post: Pushpa 2 The Rule Stampede: ಸಂತ್ರಸ್ತೆಯ ಕುಟುಂಬಕ್ಕೆ ₹50 ಲಕ್ಷ ದೇಣಿಗೆ ನೀಡಿದ ಅಲ್ಲು ಅರ್ಜುನ್ ನಿರ್ಮಾಪಕ
Next Next post: ಅಂಬಾನಿ ಕುಟುಂಬದ ಓರ್ವ ಸದಸ್ಯ 2024ರಲ್ಲಿ ಗೂಗಲ್‌ನಲ್ಲಿ ಅತೀ ಹೆಚ್ಚು ಸರ್ಚ್ ಕಂಡ ವ್ಯಕ್ತಿ!

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By