ಬೆಂಗಳೂರು: ಮೊಣಕಾಲಿನ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುಗಾದಿಯ ನಂತರ ನಾಲ್ಕು ದಿನಗಳ ಕಾಲ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಲಿದ್ದು, ತಮ್ಮ ಸಚಿವ ಸಂಪುಟದ ಹಿತಾಸಕ್ತಿಗಳನ್ನು ಕಾಪಾಡುವುದರ ಜೊತೆಗೆ ತಮ್ಮ ಸ್ಥಾನವನ್ನು ಬಲಪಡಿಸಿಕೊಳ್ಳಲಿದ್ದಾರೆ.
ಲೋಕೋಪಯೋಗಿ ಸಚಿವ ಸತೀಶ್ ಜರ್ಕಿಹೋಳಿ ಅವರು ಎರಡು ದಿನಗಳ ಹಿಂದೆ ನವದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ಕೆ.ಪಿ.ಸಿ.ಸಿ ಅಧ್ಯಕ್ಷ ಹುದ್ದೆಯ ಬದಲಾವಣೆ ಸೇರಿದಂತೆ ಕೆಲವು ಪ್ರಸ್ತಾಪಗಳನ್ನು ಮುಂದಿಡಲು ಸಿದ್ಧರಾಗಿದ್ದರು ಎಂದು ಮೂಲಗಳು ತಿಳಿಸಿವೆ. ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್ರನ್ನು ಅಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಎಪ್ರಿಲ್ 2 ರಂದು ನವದೆಹಲಿಯಲ್ಲಿ ಕರ್ನಾಟಕ ಭವನ-3ನ್ನು ಉದ್ಘಾಟಿಸಲಿರುವ ಸಿದ್ದರಾಮಯ್ಯ, ಎಪ್ರಿಲ್ 3 ಮತ್ತು 4 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಏಪ್ರಿಲ್ 5 ರಂದು ಬೆಂಗಳೂರಿಗೆ ಮರಳಲಿದ್ದಾರೆ.
ಸತೀಶ್ ಶನಿವಾರ ಇಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರೊಂದಿಗೆ ಬೆಳಗಿನ ಉಪಾಹಾರ ಸಭೆ ನಡೆಸಿದ್ದು ಮತ್ತು ಇಬ್ಬರೂ ಕೇಂದ್ರ ನಾಯಕರ ಗಮನಕ್ಕೆ ತರಬೇಕಾದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.
ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಯತ್ನ ಮತ್ತು ಅವರ ಎಂಎಲ್ಸಿ ಪುತ್ರ ರಾಜೇಂದ್ರ ಅವರ ಮೇಲೆ ಸುಪಾರಿ ನೀಡಿ ಹತ್ಯೆ ಯತ್ನ ನಡೆದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಭೇಟಿ ಮಹತ್ವದ್ದಾಗಿದೆ.